×
Ad

ಕೈಗಾರಿಕಾ ಸ್ಪಂದನ ಕಾರ್ಯಕ್ರಮ

Update: 2021-03-22 20:16 IST

ಉಡುಪಿ, ಮಾ.22: ಉಡುಪಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಾರ್ಚ್ ಕೊನೆಯ ವಾರದಲ್ಲಿ ಜಿಲ್ಲಾಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲೂತ ಸೌಕರ್ಯ ಹಾಗೂ ಉದ್ದಿಮೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಬಗ್ಗೆ ಚರ್ಚಿಸಲಾಗುವುದು. ಜಿಲ್ಲೆಯ ಕೈಗಾರಿಕೋದ್ಯಮಿಗಳು ತಮ್ಮ ಅಹವಾಲು/ಸಲಹೆಗಳು ಇದ್ದಲ್ಲಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ಇವರಿಗೆ ಮಾರ್ಚ್ 29ರ ಒಳಗೆ ಲಿಖಿತವಾಗಿ ಸಲ್ಲಿಸಬೇಕು.

ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 0820-2575650ನ್ನು ಸಂಪರ್ಕಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News