ಮಾ.23: ಪೋಷಣ್ ಪಕ್ವಾಡ ಉದ್ಘಾಟನೆ
ಮಂಗಳೂರು, ಮಾ.22: ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಪೋಷಣ್ ಅಭಿಯಾನ ಯೋಜನೆಯಡಿ ‘ಪೋಷಣ್ ಪಕ್ವಾಡ-2021’ ಉದ್ಘಾಟನಾ ಕಾರ್ಯಕ್ರಮವು ಮಾ.23ರಂದು ಬೆಳಗ್ಗೆ 10:30ಕ್ಕೆ ನಗರದ ಜಿಪಂನ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಘನ ಉಪಸ್ಥಿತಿತರಿರುವರು. ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಮತ್ತಿತರರು ಭಾಗವಹಿಸಲಿ ದ್ದಾರೆ. ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಬಾಲ ಸಾಸ್ಥ ಕಾರ್ಯಕ್ರಮದ ವೈದ್ಯಾಧಿಕಾರಿ ಡಾ.ಶಶಿರೇಖಾ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.