ಜೀವನೋಪಾಯಕ್ಕಾಗಿ ನಾಲ್ಕು ಚಕ್ರ ವಾಹನ ಹೊಂದಿರುವವರ ಬಿಪಿಎಲ್ ಕಾರ್ಡ್ ಹಿಂಪಡೆಯುವುದಿಲ್ಲ: ಸಚಿವ ಕೋಟ

Update: 2021-03-22 16:42 GMT

ಬೆಂಗಳೂರು, ಮಾ.22: ಜೀವನೋಪಾಯಕ್ಕಾಗಿ(ಬಾಡಿಗೆಗೆ) ನಾಲ್ಕುಚಕ್ರ ವಾಹನ ಹೊಂದಿರುವ ಕುಟುಂಬದವರ ಬಿಪಿಎಲ್ ಕಾರ್ಡ್ ಅನ್ನು ಹಿಂಪಡೆಯುವುದಿಲ್ಲವೆಂದು ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಪರಿಷತ್‍ನ ಮಧ್ಯಾಹ್ನದ ಕಲಾಪದಲ್ಲಿ ಬಿಜೆಪಿ ಸದಸ್ಯ ಶಾಂತರಾಮ್ ಸಿದ್ದಿ ಗಮನ ಸೆಳೆಯುವ ಸೂಚನೆಯಡಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸ್ವಂತಕ್ಕಾಗಿ ನಾಲ್ಕು ಚಕ್ರದ ವಾಹನ ಹೊಂದಿರುವ ಕುಟುಂಬದ ಬಿಪಿಎಲ್ ಕಾರ್ಡ್‍ನ್ನು ಮಾತ್ರ ಹಿಂಪಡೆಯಲಾಗುವುದು. ಇದು ಹೊಸ ನಿಯಮವೇನಲ್ಲ. ಈ ಹಿಂದಿನಿಂದಲೂ ಇದು ಜಾರಿಯಲ್ಲಿದೆ ಎಂದು ತಿಳಿಸಿದ್ದಾರೆ.

ಜೀವನೋಪಾಯಕ್ಕಾಗಿ ನಾಲ್ಕುಚಕ್ರ ವಾಹನ ಹೊಂದಿರುವವರ ಬಿಪಿಎಲ್ ಕಾರ್ಡ್‍ನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವಂತಿಲ್ಲ. ಈ ನಿಟ್ಟಿನಲ್ಲಿ ರಾಜ್ಯದ ಜಿಲ್ಲಾಧಿಕಾರಿಗಳಿಗೆ ಗೊಂದಲಗಳಿದ್ದರೆ ಸರಕಾರದ ವತಿಯಿಂದ ಸುತ್ತೋಲೆಯನ್ನು ಕಳುಹಿಸಿಕೊಡಲಾಗುವುದೆಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News