ಮುಂಬೈ: ಸಾರ್ವಜನಿಕ ಸ್ಥಳಗಳಲ್ಲಿ ಹೋಳಿ ಆಚರಣೆಗೆ ನಿಷೇಧ

Update: 2021-03-23 14:50 GMT

ಮುಂಬೈ: ಮಹಾರಾಷ್ಟ್ರ ರಾಜ್ಯದಲ್ಲಿ ಕೊರೋನ ವೈರಸ್ ಅಟ್ಟಹಾಸ ಮತ್ತೆ ಆರಂಭವಾಗಿರುವ ಹಿನ್ನೆಲೆಯಲ್ಲಿ ವಾಣಿಜ್ಯ ನಗರಿ ಮುಂಬೈನ ಸಾರ್ವಜನಿಕ ಸ್ಥಳಗಳಲ್ಲಿ ಹೋಳಿ ಆಚರಣೆಯನ್ನು ಬೃಹನ್ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ)ನಿಷೇಧಿಸಿದೆ.

ಮಂಗಳವಾರ ಮುಂಬೈ ಮಹಾನಗರದಲ್ಲಿ 3,512 ಹೊಸ ಕೇಸ್ ಗಳು ವರದಿಯಾಗಿದ್ದು, 1,203 ಮಂದಿ ಚೇತರಿಸಿಕೊಂಡಿದ್ದಾರೆ. ಮಂದಿ ಮೃತಪಟ್ಟಿದ್ದಾರೆ.

ತೆಲಂಗಾಣದಲ್ಲಿ ಶಿಕ್ಷಣ ಸಂಸ್ಥೆಗಳ ತಾತ್ಕಾಲಿಕ ಮುಚ್ಚುಗಡೆ

ರಾಜ್ಯದಲ್ಲಿ ಇತ್ತೀಚೆಗಿನ ದಿನಗಳಲ್ಲಿ ಕೊರೋನ ವೈರಸ್ ಹೊಸ ಪ್ರಕರಣಗಳು ವರದಿಯಾಗುತ್ತಿರುವ ಕಾರಣ ವೈರಸ್ ಹರಡುವುದನ್ನು ತಡೆಯಲು ರಾಜ್ಯದಲ್ಲಿ ಬುಧವಾರದಿಂದ ಎಲ್ಲ ಶಿಕ್ಷಣ ಸಂಸ್ಥೆಗಳನ್ನು ತಾತ್ಕಾಲಿಕವಾಗಿ ಮುಚ್ಚಲು ನಿರ್ಧರಿಸಲಾಗಿದ್ದು, ಆನ್ ಲೈನ್ ತರಗತಿ ನಡೆಸಲು ಅನುಮತಿಸಲಾಗಿದೆ ಎಂದು ತೆಲಂಗಾಣ ರಾಜ್ಯ ಸರಕಾರ ತಿಳಿಸಿದೆ.

ಎಲ್ಲ ಸರಕಾರಿ ಹಾಗೂ ಖಾಸಗಿಯವರಿಂದ ನಡೆಸಲ್ಪಡುತ್ತಿರುವ ಶಿಕ್ಷಣ ಸಂಸ್ಥೆಗಳು, ಹಾಸ್ಟೆಲ್ ಗಳು ಹಾಗೂ ಗುರುಕುಲ ಸಂಸ್ಥೆಗಳಿಗೆ ಮುಚ್ಚುವ ಆದೇಶ ಅನ್ವಯವಾಗುತ್ತದೆ. ಮೆಡಿಕಲ್ ಕಾಲೇಜುಗಳಿಗೆ ಇದು ಅನ್ವಯವಾಗುವುದಿಲ್ಲ.  ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿಗಳನ್ನು ಮುಂದುವರಿಸಬೇಕು ಎಂದು ಶಿಕ್ಷಣ ಸಚಿವೆ ಸಬಿತಾ ಇಂದ್ರ ರೆಡ್ಡಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News