×
Ad

ರಮೇಶ್ ಜಾರಕಿಹೊಳಿ ವಿರುದ್ಧ ಈಡಿಗೆ ದೂರು

Update: 2021-03-23 21:02 IST

ಬೆಂಗಳೂರು, ಮಾ.23: ಸಿಡಿ ಪ್ರಕರಣದಲ್ಲಿ ಹಣದ ವಹಿವಾಟು ನಡೆದಿದೆ ಎಂಬ ಹೇಳಿಕೆ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಜಾರಿ ನಿರ್ದೇಶನಾಲಯ(ಈಡಿ)ಕ್ಕೆ ಕಾಂಗ್ರೆಸ್ ದೂರು ಸಲ್ಲಿಸಿದೆ.

ಮಂಗಳವಾರ ಕೆಪಿಸಿಸಿ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ವೈ.ಪುಟ್ಟರಾಜು ಅವರು ದೂರು ಸಲ್ಲಿಕೆ ಮಾಡಿದ್ದು, ಸೂಕ್ತ ರೀತಿಯಲ್ಲಿ ತನಿಖೆ ನಡೆಸುವಂತೆ ಒತ್ತಾಯ ಮಾಡಿದರು.

ಬಳಿಕ ಈ ಕುರಿತು ಸುದ್ದಿಗಾರರೊಂದಿಗೆ ಮಾಹಿತಿ ನೀಡಿದ ಅವರು, ಮಾ.9ರಂದು ಶಾಸಕ ರಮೇಶ್ ಜಾರಕಿಹೊಳಿ ಅವರು, ಸಿಡಿ ಪ್ರಕರಣದಲ್ಲಿ ತಮ್ಮನ್ನು ಸಿಲುಕಿಸಲು ಸುಮಾರು 5ರಿಂದ 20 ಕೋಟಿ ಹಾಗೂ 100 ಕೋಟಿವರೆಗೂ ಹಣದ ವಹಿವಾಟು ನಡೆದಿದೆ. ದೃಶ್ಯದಲ್ಲಿರುವ ಯುವತಿಗೆ 2 ಫ್ಲ್ಯಾಟ್‍ಗಳನ್ನು ಕೊಡಿಸಲಾಗಿದೆ ಎಂದು ಬಹಿರಂಗ ಹೇಳಿಕೆ ನೀಡಿದ್ದರು. ಆದ್ದರಿಂದ ಹಣದ ವಹಿವಾಟಿನ ಕುರಿತು ತನಿಖೆ ನಡೆಸಿ, 2002ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News