ಉಡುಪಿ: ದಂಡದ ಜೊತೆ ಮಾಸ್ಕ್ ನೀಡಿ ಜಾಗೃತಿ ಮೂಡಿಸಿದ ಪೊಲೀಸರು !
Update: 2021-03-23 22:36 IST
ಉಡುಪಿ, ಮಾ. 23: ಒಂದೆಡೆ ಜಿಲ್ಲಾಧಿಕಾರಿ ನಗರದಲ್ಲಿ ಸಂಚರಿಸಿ ಮಾಸ್ಕ್ ಧರಿಸದ ಸಾರ್ವಜನಿಕರಿಂದ ದಂಡ ವಸೂಲಿ ಮಾಡಿದರೆ, ಇನ್ನೊಂದೆಡೆ ನಗರ ಪೊಲೀಸರು ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವುದರ ಜೊತೆಗೆ ಮಾಸ್ಕ್ ನೀಡುವ ಮೂಲಕ ಜಾಗೃತಿ ಮೂಡಿಸಿದರು.
ನಗರದ ಸರ್ವಿಸ್ ಬಸ್ ನಿಲ್ದಾಣದಲ್ಲಿ ಉಡುಪಿ ವೃತ್ತ ನಿರೀಕ್ಷಕ ಮಂಜು ನಾಥ್, ಸಂಚಾರ ಪೊಲೀಸ್ ಠಾಣೆಯ ಎಸ್ಸೈ ಅಬ್ದುಲ್ ಖಾದರ್, ಮಾಸ್ಕ್ ಧರಿಸದೆ ಓಡಾಡುತ್ತಿದ್ದ ಸಾರ್ವಜನಿಕರನ್ನು ಕರೆದು ದಂಡ ವಸೂಲಿ ಮಾಡಿದರು. ಬಳಿಕ ತಮ್ಮಲ್ಲಿದ್ದ ಮಾಸ್ಕ್‌ಗಳನ್ನು ಅವರಿಗೆ ತಾವೇ ತೋಡಿಸುವ ಮೂಲಕ ಅರಿವು ಮೂಡಿಸಿದರು. ಪೊಲೀಸರ ಈ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು.