ಕಂದಕಕ್ಕೆ ಬಿದ್ದಿದ್ದ ಆನೆ ಮರಿಯನ್ನು ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು
Update: 2021-03-23 22:39 IST
ಮೈಸೂರು,ಮಾ.23: ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಕೂರ್ಣೆಗಾಲ ಬಳಿ ಕಂದಕಕ್ಕೆ ಬಿದ್ದಿದ್ದ ಎರಡು ವರ್ಷದ ಗಂಡಾನೆ ಮರಿಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿದ್ದಾರೆ.
ಆನೆ ಮರಿಯು ಕಾಡಿನಿಂದ ನಾಡಿಗೆ ಬಂದು ಕಂದಕಕ್ಕೆ ಬಿದ್ದು ಹೊರಬರಲಾಗದೇ ಒದ್ದಾಡುತ್ತಿತ್ತು. ಇದನ್ನು ಕಂಡು ಸ್ಥಳೀಯರು ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದರು. ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖಾ ಸಿಬ್ಬಂದಿಗಳು ಜೆಸಿಬಿ ಸಹಾಯದಿಂದ ಆನೆಯ ಮರಿಯನ್ನು ರಕ್ಷಿಸಿ ಬಳಿಕ ಅದರ ತಾಯಿಯ ಬಳಿ ಬಿಟ್ಟಿದ್ದಾರೆ.