ಭ್ರಷ್ಟಾಚಾರ ಮುಕ್ತ, ಪಾರದರ್ಶಕ ಕಸಾಪ ನಿರ್ಮಾಣದ ಗುರಿ: ಮುಲಾಲಿ ಭರವಸೆ
ಉಡುಪಿ, ಮಾ.24: ಭ್ರಷ್ಟಾಚಾರ ಮುಕ್ತ ಹಾಗೂ ಪಾರದರ್ಶಕ ಕನ್ನಡ ಸಾಹಿತ್ಯ ಪರಿಷತ್ ನಿರ್ಮಾಣ ಮಾಡುವುದು ಮುಖ್ಯ ಗುರಿಯಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ರಾಜಶೇಖರ ಮುಲಾಲಿ ಹೇಳಿದ್ದಾರೆ.
ಉಡುಪಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಕಸಾಪ ರಾಜ್ಯಮಟ್ಟದ ಮಹಿಳಾ ಘಟಕವನ್ನು ಪ್ರಾರಂಭಿಸಿ ಮಹಿಳೆಯರಿಗೆ ಹೆಚ್ಚಿತ ಆದ್ಯತೆ ನೀಡುವುದಾಗಿ ಭರವಸೆ ನೀಡ ಲಾಗಿದೆ. ಅದೇ ರೀತಿ ಪರಿಷತ್ತಿಗೆ ಡಿಜಿಟಲ್ ಸ್ಪರ್ಶ ನೀಡಿ ಸರ್ವ ಸದಸ್ಯರಿಗೆ ಸ್ಮಾರ್ಟ್‌ಕಾರ್ಡ್ ನೀಡಲಾಗುವುದು ಎಂದರು.
ರಾಜ್ಯದ ಪ್ರತಿ ಜಿಲ್ಲೆ/ತಾಲೂಕುಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿಗೆ ಸ್ವಂತ ಕನ್ನಡ ಭವನ ನಿರ್ಮಾಣ ಮಾಡುವ ಗುರಿಯನ್ನು ಹೊಂದಲಾಗಿದೆ. ಪರಿಷತ್‌ನ ನಿಕಟಪೂರ್ವ ಅಧ್ಯಕ್ಷರುಗಳು, ಪದಾಧಿಕಾರಿಗಳು, ಹಿರಿಯ ಸದಸ್ಯ ರನ್ನು ಗುರು ತಿಸಿ ಕೇಂದ್ರ ಮತ್ತು ಜಿಲ್ಲಾ ಮಟ್ಟದಲ್ಲಿ ಗೌರವಿಸಿ ಸಲಹಾ ಸಮಿತಿಯನ್ನು ರಚಿಸ ಲಾಗುವುದು ಎಂದು ಅವರು ಭರವಸೆ ನೀಡಿದರು.
ಪರಿಷತ್ತಿನ ಸದಸ್ಯರ ಪ್ರತಿಭಾವಂತ ಮಕ್ಕಳ ಕನ್ನಡ ಮಾಧ್ಯಮದಲ್ಲಿ ಉನ್ನತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿ ವೇತನ ನೀಡಿ ಪ್ರೋತ್ಸಾಹಿಸಲಾಗುವುದು. ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದವರಿಗೆ ಸರಕಾರಿ ಉದ್ಯೋಗದಲ್ಲಿ ಮೀಸ ಲಾತಿ ಹೆಚ್ಚಿಸುವುದು ಮತ್ತು ಖಾಸಗಿ ವಲಯದಲ್ಲಿ ಉದ್ಯೋಗ ಮೀಸಲಾತಿ ಗಾಗಿ ಒತ್ತಾಯಿಸಲಾಗುವುದು ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ದುರುಗೇಶ್ ಉಪ್ಪಾರ್, ಗೋಪಾಲಕೃಷ್ಣ ಭಟ್, ತರುಣ್ ಕುಮಾರ್ ಉಪಸ್ಥಿತರಿದ್ದರು.