×
Ad

ಸಿಎಂ, ಸ್ಪೀಕರ್ ಸಹಿತ ಎಲ್ಲ ಬಿಜೆಪಿ ಶಾಸಕರು ತಮ್ಮ ವೈವಾಹಿಕ ವಿವರ ಬಹಿರಂಗಪಡಿಸಲಿ : ಸಿದ್ದರಾಮಯ್ಯ

Update: 2021-03-25 10:57 IST

ಬೆಂಗಳೂರು : ರಾಜ್ಯದ ಎಲ್ಲಾ 224 ಶಾಸಕರೂ ಏಕಪತ್ನಿ ವ್ರತಸ್ಥರೇ ? ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಹೇಳಿಕೆ ನೀಡಿರುವುದು ಭಾರೀ ವಿವಾದವಾಗಿದೆ. ಗುರುವಾರ ಬೆಳಗ್ಗೆ ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಿಎಂ, ಸ್ಪೀಕರ್ ಸಹಿತ ಎಲ್ಲ ಬಿಜೆಪಿ ಶಾಸಕರು ತಮ್ಮ ವೈವಾಹಿಕ ವಿವರ ಬಹಿರಂಗಪಡಿಸಬೇಕು ಎಂದು ಹೇಳಿದ್ದಾರೆ.

ಸುಧಾಕರ್ ಹೇಳಿಕೆಯನ್ನು ಬಿಜೆಪಿ ಶಾಸಕರು ವಿರೋಧಿಸುವುದಾಗಿದ್ದರೆ ನಮ್ಮ ಪಕ್ಷದ ಶಾಸಕರೆಲ್ಲರೂ ಸ್ವ ಇಚ್ಚೆಯಿಂದ ತನಿಖೆಗೆ ಒಳಪಡಲು ನಿರ್ಧರಿಸಿದಂತೆ ಅವರೂ ಕೂಡ ಸಿಎಂ ಅವರಿಗೆ ತಕ್ಷಣ ಪತ್ರ ಬರೆದು ತಮ್ಮ ಬಗ್ಗೆ ಕೂಡಾ ತನಿಖೆ ನಡೆಯಬೇಕೆಂದು ಮನವಿ ಮಾಡಬೇಕು ಎಂದು ಟ್ವೀಟ್ ಮಾಡಿದ್ದಾರೆ.

ಸಚಿವ ಸುಧಾಕರ್ ಹೇಳಿಕೆಯನ್ನು ಬಿಜೆಪಿ ಶಾಸಕರು ಒಪ್ಪಿಕೊಳ್ಳುವುದಾದರೆ, ರಾಜ್ಯ ಸರ್ಕಾರ ತಕ್ಷಣ ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 494 ಮತ್ತು 495ರ ಅನ್ವಯ ಕಾನೂನು ಕ್ರಮ ಕೈಗೊಳ್ಳಬೇಕು. 1955ರ ಹಿಂದೂ ವಿವಾಹ ಕಾಯ್ದೆಯಡಿ ಬಹುಪತ್ನಿತ್ವ ಕಾನೂನು ಪ್ರಕಾರ ಅಪರಾಧವಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News