ಅಲ್ಪಸಂಖ್ಯಾತ ಮತ ವಿಭಜಿಸಲು ಹೊಸ ರಾಜಕೀಯ ಪಕ್ಷಕ್ಕೆ ಬಿಜೆಪಿ ಬೆಂಬಲ: ಮಮತಾ ಬ್ಯಾನರ್ಜಿ

Update: 2021-03-25 09:44 GMT

ಕೋಲ್ಕತಾ: ಮುಂಬರುವ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅಲ್ಪಸಂಖ್ಯಾತ ಮತಗಳನ್ನು ವಿಭಜಿಸಲು ಬಿಜೆಪಿ  ಬಂಗಾಳದಲ್ಲಿ ಹೊಸ ರಾಜಕೀಯ ಪಕ್ಷವೊಂದನ್ನು ಬೆಂಬಲಿಸುತ್ತಿದೆ ಎಂದು ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಆರೋಪಿಸಿದ್ದಾರೆ.

ಯಾವುದೇ ಪಕ್ಷ ಅಥವಾ ಯಾವುದೇ ವ್ಯಕ್ತಿಯ ಹೆಸರನ್ನು ಉಲ್ಲೇಖಿಸದ ಮಮತಾ, ಆ ಸಂಘಟನೆಯ ಸ್ಥಾಪಕರು ಬಿಜೆಪಿಯಿಂದ ಹಣ ಸ್ವೀಕರಿಸಿದ್ದಾರೆ ಎಂದು ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಹೇಳಿದ್ದಾರೆ.

"ಅಲ್ಪ ಸಂಖ್ಯಾತ ಮತಗಳ ಪಾಲನ್ನು ಪಡೆದುಕೊಳ್ಳಲು ಹಾಗೂ ಬಿಜೆಪಿಗೆ ಸಹಾಯ ಮಾಡಲು ಬಿಜೆಪಿಯ ಆದೇಶದ ಮೇರೆಗೆ ರಾಜ್ಯದಲ್ಲಿ ಹೊಸ ರಾಜಕೀಯ ಸಂಘಟನೆಯನ್ನು ಆರಂಭಿಸಲಾಗಿದೆ .ದಯವಿಟ್ಟು ಆ ಸಂಘಟನೆಯ ಅಭ್ಯರ್ಥಿಗೆ ಮತ ಚಲಾಯಿಸಬೇಡಿ'' ಎಂದು ಮಮತಾ ವಿನಂತಿಸಿದರು.

ಸಿಪಿಎಂ ಹಾಗೂ ಕಾಂಗ್ರೆಸ್ ಮೈತ್ರಿಕೂಟವು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿವೆ ಎಂದೂ ಮಮತಾ ಬ್ಯಾನರ್ಜಿ ಆರೋಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News