ರೈತ ನಾಯಕ ರಾಕೇಶ್ ಟಿಕಾಯತ್ ವಿರುದ್ಧದ ಪ್ರಕರಣ ಹಿಂಪಡೆಯಲು ಕುಮಾರಸ್ವಾಮಿ ಒತ್ತಾಯ

Update: 2021-03-25 12:43 GMT

ಬೆಂಗಳೂರು, ಮಾ.25: ರೈತ ನಾಯಕ ರಾಕೇಶ್ ಟಿಕಾಯತ್ ವಿರುದ್ಧ ಶಿವಮೊಗ್ಗ, ಹಾವೇರಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಅವರ ಮೇಲಿದೆ. ರೈತರ ಧ್ವನಿ ಹತ್ತಿಕ್ಕುವ ಸರಕಾರದ ಪ್ರಯತ್ನಗಳಿವು. ಪ್ರಚೋದನಕಾರಿ ಭಾಷಣದ ಆರೋಪದ ಮೇಲೆ ನಿಜಕ್ಕೂ ಕೇಸು ದಾಖಲಿಸುವುದೇ ಆದರೆ ಬಿಜೆಪಿಯ ಎಷ್ಟು ನಾಯಕರ ಮೇಲೆ ಎಷ್ಟೆಷ್ಟು ಪ್ರಕರಣ ದಾಖಲಾಗಬೇಕಿತ್ತು? ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಗಾರಿದ್ದಾರೆ.

ಈ ಸಂಬಂಧ ಟ್ವೀಟ್‍ಗಳನ್ನು ಮಾಡಿರುವ ಅವರು, ‘ಹೋರಾಟ ಮಾಡಲು ರೈತರು ದಿಲ್ಲಿಗೆ ಬರಬೇಕಿಲ್ಲ, ದಿಲ್ಲಿಯಂತೆ ಇಲ್ಲೇ ಹೋರಾಟ ಮಾಡಿ’ ಎಂಬ ಟಿಕಾಯತ್ ಹೇಳಿಕೆಯಲ್ಲಿ ಪ್ರಚೋದನೆ ಏನೂ ಇಲ್ಲ. ಇದರಲ್ಲಿ ತಪ್ಪು ಕಂಡವರದ್ದು ಗ್ರಹಿಕೆ ದೋಷವಷ್ಟೇ. ಹೋರಾಟ, ಹೋರಾಟಕ್ಕೆ ಕರೆ ನೀಡುವುದು ಸಂವಿಧಾನಬದ್ಧ. ಅವರು ಕೊಚ್ಚಿ ಎನ್ನಲಿಲ್ಲ, ಕೊಲ್ಲಿರಿ ಎನ್ನಲಿಲ್ಲ. ಟಿಕಾಯತ್ ವಿರುದ್ಧದ ಕೇಸು ರದ್ದಾಗಬೇಕು ಎಂದು ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News