ಮಾ. 27: ಉಳ್ಳಾಲ ತಾಲೂಕು ಬ್ಯಾರಿ ಸಾಹಿತ್ಯ, ಸಾಂಸ್ಕೃತಿಕ ಸಮ್ಮೇಳನ
ಮಂಗಳೂರು, ಮಾ.25: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ವತಿಯಿಂದ ಮೇಲ್ತೆನೆ (ಬ್ಯಾರಿ ಎಲ್ತ್‌ಕಾರ್ ಪಿನ್ನೆ ಕಲಾವಿದಮ್ಮಾರೊ ಕೂಟ, ದೇರಳಕಟ್ಟೆ)ಯ ಸಹಕಾರದಲ್ಲಿ ಉಳ್ಳಾಲ ತಾಲೂಕು ಪ್ರಥಮ ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನವು ಮಾ.27ರಂದು ಬೆಳಗ್ಗೆ 9:30ರಿಂದ ಸಂಜೆ 5ರವರೆಗೆ ಉಳ್ಳಾಲ ಅಳೇಕಲದ ಮದನಿ ಪಿಯು ಕಾಲೇಜಿನಲ್ಲಿ ನಡೆಯಲಿದೆ.
ಸಾಹಿತಿಕ, ಕವಿ ಆಲಿಕುಂಞಿ ಪಾರೆಯ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಮ್ಮೇಳನವನ್ನು ಪದ್ಮಶ್ರೀ ಪುರಸ್ಕೃತರ ಹರೇಕಳ ಹಾಜಬ್ಬ ಉದ್ಘಾಟಿಸಲಿದ್ದಾರೆ. ಸಮ್ಮೇಳನದಲ್ಲಿ ಎರಡು ಕವಿಗೋಷ್ಠಿ, ಎರಡು ವಿಚಾರಗೋಷ್ಠಿ, ಭಾಷಣ, ಅಡುಗೆ, ಮೆಹಂದಿ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ ನಡೆಯಲಿದೆ.
ಸಮಾರೋಪ ಸಮಾರಂಭವನ್ನು ಶಾಸಕ ಯು.ಟಿ.ಖಾದರ್ ಉದ್ಘಾಟಿಸಲಿದ್ದಾರೆ. ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ರಿಜಿಸ್ಟ್ರಾರ್ ಪೂರ್ಣಿಮಾ, ಸ್ವಾಗತ ಸಮಿತಿಯ ಅಧ್ಯಕ್ಷ ಡಾ.ಕೆ.ಎಂ. ಮುನೀರ್ ಬಾವಾ, ಉಳ್ಳಾಲ ನಗರಸಭೆಯ ಅಧ್ಯಕ್ಷೆ ಚಿತ್ರಕಲಾ, ಉಪಾಧ್ಯಕ್ಷ ಅಯ್ಯೂಬ್ ಮಂಚಿಲ, ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ದಿ ಮೈಸೂರು ಇಂಡಸ್ಟ್ರೀಸ್ ಲಿ.ನ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರು, ರಾಜ್ಯ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಕಣಚೂರು ಮೋನು, ಉಳ್ಳಾಲ ಸೈಯದ್ ಮದನಿ ದರ್ಗಾ ಸಮಿತಿಯ ಅಧ್ಯಕ್ಷ ಹಾಜಿ ಅಬ್ದುರ್ರಶೀದ್ ಉಳ್ಳಾಲ್, ಬ್ಯಾರಿ ಸಾಹಿತ್ಯ ಅಕಾಡಮಿಯ ಮಾಜಿ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್ ಭಾಗವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಮಂಗಳೂರು ವಿವಿ ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಡಾ. ಅಬೂಬಕರ್ ಸಿದ್ದೀಕ್, ಬ್ಯಾರಿ ಅಧ್ಯಯನ ಪೀಠದ ಸಲಹಾ ಸಮಿತಿಯ ಸದಸ್ಯ ಇಬ್ರಾಹೀಂ ಕೋಡಿಜಾಲ್, ಮಂಗಳೂರು ವಿವಿ ಬ್ಯಾರಿ ಡಿಪ್ಲೊಮಾ ಕೋರ್ಸ್‌ನ ಸದಸ್ಯ ಕೆ.ಎಂ.ಅಬೂಬಕರ್ ಸಿದ್ದೀಕ್ ಮೋಂಟುಗೋಳಿ, ಬ್ಯಾರಿ ಲಿಪಿ ರಚನೆ ಮತ್ತು ಸಂಶೋಧನಾ ಸಮಿತಿಯ ಸದಸ್ಯರಾದ ಡಾ. ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ, ಹೈದರ್ ಅಲಿ ಕೀಲಾರಿ ಮತ್ತು ಎ.ಕೆ.ಕುಕ್ಕಿಲ, ಸಾಮಾಜಿಕ ಮುಖಂಡರಾದ ಹೈದರ್ ಪರ್ತಿಪ್ಪಾಡಿ, ನಝೀರ್ ಉಳ್ಳಾಲ್, ಫಾರೂಕ್ ಉಳ್ಳಾಲ್ ಭಾಗವಹಿಸಲಿದ್ದಾರೆ ಎಂದು ಮೇಲ್ತೆನೆಯ ಅಧ್ಯಕ್ಷ ಮನ್ಸೂರ್ ಅಹ್ಮದ್ ಸಾಮಣಿಗೆ ತಿಳಿಸಿದ್ದಾರೆ.