ರಾಕೇಶ್ ಟಿಕಾಯತ್‌ ವಿರುದ್ಧದ ಪ್ರಕರಣ ರದ್ದುಗೊಳಿಸಲು ಸಿದ್ದರಾಮಯ್ಯ ಆಗ್ರಹ

Update: 2021-03-25 16:21 GMT

ಬೆಂಗಳೂರು, ಮಾ.25: ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇಲೆ ರೈತ ಮುಖಂಡ ರಾಕೇಶ್ ಟಿಕಾಯತ್‌ ಅವರ ವಿರುದ್ಧ  ಶಿವಮೊಗ್ಗದಲ್ಲಿ ಎಫ್ಐಆರ್ ದಾಖಲಾಗಿದ್ದು, ರಾಜ್ಯಾದ್ಯಂತ ರೈತ ಮುಖಂಡರು, ರಾಜಕೀಯ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಕೇಶ್ ಟಿಕಾಯತ್ ವಿರುದ್ಧದ ಪ್ರಕರಣ ಕೈಬಿಡಬೇಕೆಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರೈತನಾಯಕ ರಾಕೇಶ್ ಟಿಕಾಯತ್ ಅವರ ವಿರುದ್ಧ ಶಿವಮೊಗ್ಗ ಮತ್ತು ಹಾವೇರಿ ಪೊಲೀಸರು ಪ್ರಕರಣ ದಾಖಲಿಸಿರುವುದು ಖಂಡನೀಯ. ತಾನೊಬ್ಬ ರೈತನಾಯಕನೆಂದು ಬಿಂಬಿಸುತ್ತಾ ಮುಖ್ಯಮಂತ್ರಿ ಪಟ್ಟಕ್ಕೇರಿರುವ ಯಡಿಯೂರಪ್ಪ ಅವರ ಅಸಲಿ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ತಕ್ಷಣ ಈ ಪ್ರಕರಣವನ್ನು ಹಿಂದೆಗೆದುಕೊಳ್ಳಬೇಕೆಂದು ಆಗ್ರಹಿಸುತ್ತೇನೆ ಎಂದು ತಿಳಿಸಿದ್ದಾರೆ.

ರೈತ ವಿರೋಧಿ ಬಿಜೆಪಿಗೆ ಕರಾಳ ಕೃಷಿ ಕಾಯ್ದೆಯನ್ನು ವಿರೋಧಿಸುವವರು ಅಪರಾಧಿಗಳಂತೆ ಕಾಣುವುದು ಸಹಜವೇ ಆಗಿದೆ. ಆದರೆ ದೇಶದ ಜನತೆಗೆ ನಿಜವಾದ ಅಪರಾಧಿಗಳು ಯಾರೆಂದು ಗೊತ್ತಾಗಿದೆ. ಪೊಲೀಸ್ ಬಲಪ್ರಯೋಗದಿಂದ ರೈತ ಶಕ್ತಿಯನ್ನು ಹಣಿಯಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಭ್ರಮೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News