×
Ad

ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ರಾಜೇಂದ್ರ, ಜೈಬುನ್ನಿಸಾ ಪ್ರಮಾಣ ವಚನ

Update: 2021-03-25 22:24 IST

ಬೆಂಗಳೂರು, ಮಾ.25: ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಆಗಿದ್ದ ರಾಜೇಂದ್ರ ಬಾದಾಮಿಕರ್ ಹಾಗೂ ವಿಚಕ್ಷಣಾ ವಿಭಾಗದ ರಿಜಿಸ್ಟ್ರಾರ್ ಆಗಿದ್ದ ಖಾಜಿ ಜೈಬುನ್ನಿಸಾ ಮೊಹಿದ್ದೀನಿ ಅವರು ರಾಜ್ಯ ಹೈಕೋರ್ಟ್‍ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಗುರುವಾರ ಮುಖ್ಯ ನ್ಯಾಯಮೂರ್ತಿಗಳಿಂದ ಪ್ರಮಾಣ ವಚನ ಸ್ವೀಕರಿಸಿದರು.

ರಾಷ್ಟ್ರಪತಿಗಳ ಆದೇಶಾನುಸಾರ ಕೇಂದ್ರ ಕಾನೂನು ಸಚಿವಾಲಯ ಇಬ್ಬರನ್ನೂ ರಾಜ್ಯ ಹೈಕೋರ್ಟ್‍ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕ ಮಾಡಿ ಆದೇಶ ಹೊರಡಿಸಿತ್ತು. ಅದರಂತೆ ಮುಖ್ಯ ನ್ಯಾಯಮೂರ್ತಿಗಳ ಕೋರ್ಟ್ ಹಾಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಬ್ಬರೂ ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ನೂತನ ನ್ಯಾಯಮೂರ್ತಿಗಳ ಕುಟುಂಬಸ್ಥರು ಹಾಗೂ ವಕೀಲರು ಉಪಸ್ಥಿತರಿದ್ದರು. ಮುಂದಿನ ಎರಡು ವರ್ಷಗಳ ಕಾಲ ಇವರು ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಲಿದ್ದಾರೆ.

ಈ ಇಬ್ಬರು ನ್ಯಾಯಾಂಗದ ಅಧಿಕಾರಿಗಳನ್ನು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಸಿಜೆಐ ಎಸ್.ಎ.ಬೊಬ್ಡೆ ನೇತೃತ್ವದ ಕೊಲಿಜಿಯಂ ಕಳೆದ ಫೆ.4ರಂದು ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಿತ್ತು. ಇಬ್ಬರು ಹೆಚ್ಚುವರಿ ನ್ಯಾಯಮೂರ್ತಿಗಳ ಸೇರ್ಪಡೆಯೊಂದಿಗೆ ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ ಇದೀಗ 49ಕ್ಕೆ ಏರಿಕೆಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News