ಮೂರನೇ ಕ್ರಮಾಂಕದಲ್ಲಿ ಹೊಸ ಮೈಲುಗಲ್ಲು ತಲುಪಿದ ವಿರಾಟ್ ಕೊಹ್ಲಿ

Update: 2021-03-26 12:13 GMT

  ಪುಣೆ: ಭಾರತದ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಮೈದಾನದಲ್ಲಿ ಶುಕ್ರವಾರ ನಡೆದ ಎರಡನೇ ಏಕದಿನ ಅಂತರ್ ರಾಷ್ಟ್ರೀಯ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಹೊಸ ಮೈಲುಗಲ್ಲು ತಲುಪಿದರು.

ಕೊಹ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ 10,000ಕ್ಕೂ ಅಧಿಕ ರನ್ ಕಲೆಹಾಕಿದ ವಿಶ್ವದ ಎರಡನೇ ಬ್ಯಾಟ್ಸ್‌ಮನ್ ಎಂಬ ಕೀರ್ತಿಗೆ ಭಾಜನರಾದರು. ಆಸ್ಟ್ರೇಲಿಯದ ಮಾಜಿ ನಾಯಕ ರಿಕಿ ಪಾಂಟಿಂಗ್ ಈ ಸಾಧನೆ ಮಾಡಿದ ಮೊದಲ ಕ್ರಿಕೆಟಿಗನಾಗಿದ್ದಾರೆ. ಪಾಂಟಿಂಗ್ 3ನೇ ಕ್ರಮಾಂಕದಲ್ಲಿ 330 ಇನಿಂಗ್ಸ್‌ಗಳಲ್ಲಿ ಆಡಿದ್ದು, ಒಟ್ಟು 12,662 ರನ್ ಗಳಿಸಿ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಭಾರತದ ನಾಯಕ ಕೊಹ್ಲಿ 3ನೇ ಕ್ರಮಾಂಕದಲ್ಲಿ ಕೇವಲ 190 ಇನಿಂಗ್ಸ್ ಗಳಲ್ಲಿ ಆಡಿ 10,000 ರನ್ ಪೂರೈಸಿದರು.

ಶ್ರೀಲಂಕಾದ ಮಾಜಿ ಬ್ಯಾಟ್ಸ್‌ಮನ್ ಕುಮಾರ ಸಂಗಕ್ಕರ 3ನೇ ಕ್ರಮಾಂಕದಲ್ಲಿ ಗರಿಷ್ಠ ರನ್ ಗಳಿಸಿದವರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಸಂಗಕ್ಕರ 238 ಇನಿಂಗ್ಸ್ ಗಳಲ್ಲಿ 9,747 ರನ್ ಗಳಿಸಿದ್ದಾರೆ. ಆ ನಂತರ ದಕ್ಷಿಣ ಆಫ್ರಿಕಾದ ಜಾಕ್ ಕಾಲಿಸ್(7,774)ಅವರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News