ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2021-03-26 13:25 GMT

ಬೆಂಗಳೂರು, ಮಾ.26: ರಾಜ್ಯ ಸರಕಾರವು ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಶುಕ್ರವಾರ ಆದೇಶ ಹೊರಡಿಸಿದೆ.

ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ಡಾ.ರವಿಕುಮಾರ್ ಸುರ್‍ಪುರ್ ಅವರನ್ನು ಹಾಲಿ ಇರುವ ಹುದ್ದೆಯಲ್ಲಿ ಪ್ರಭಾರದಲ್ಲಿ ಮುಂದುವರಿಸಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರಕಾರದ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಪೆದ್ದಪ್ಪಯ್ಯ ಅವರನ್ನು ರೇಷ್ಮೆ ಅಭಿವೃದ್ಧಿ ಇಲಾಖೆಯ ಆಯುಕ್ತ ಹಾಗೂ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ. ರಾಜ್ಯ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ)ಯ ವಿಶೇಷ ಜಿಲ್ಲಾಧಿಕಾರಿ ಡಾ.ಅನುರಾಧಾ ಕೆ.ಎನ್. ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News