ಕಾಂಗ್ರೆಸ್ ಕಚೇರಿಯಲ್ಲಿ ಷಡ್ಯಂತ್ರ ನಡೆದಿದೆಯೇ?: ಸಿಡಿ ಪ್ರಕರಣದ ಬಗ್ಗೆ ಬಿಜೆಪಿ ಪ್ರಶ್ನೆ
Update: 2021-03-26 22:35 IST
ಬೆಂಗಳೂರು, ಮಾ.26: ಆ ಪ್ರಕರಣದ ‘ಸಂತ್ರಸ್ತೆ’ ನೇರವಾಗಿ ಮಹಾನಾಯಕನ ಹೆಸರು ಪ್ರಸ್ತಾಪ ಮಾಡಿದ್ದಾಳೆ. ಮಹಾನಾಯಕ ನಮ್ಮ ಜೊತೆ ಇದ್ದಾನೆ ಎಂಬ ಮಾತುಗಳನ್ನಾಡಿದ್ದಾಳೆ. ಸದನದಲ್ಲಿ ಬೊಬ್ಬಿರಿದ ಮಹಾಶೂರರು ಈಗೇನು ಹೇಳುತ್ತಾರೆ? ಕಾಂಗ್ರೆಸ್ ಕಚೇರಿಯಲ್ಲೆ ಷಡ್ಯಂತ್ರ ನಡೆದಿದೆಯೇ? ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಪ್ರಶ್ನಿಸಿದೆ.
ಆರಂಭದಿಂದಲೂ ಮಹಾನಾಯಕನ ಸುತ್ತಲೂ ಪ್ರಕರಣ ಗಿರಕಿ ಹೊಡೆಯುತ್ತಿತ್ತು. ಮಹಾನಾಯಕನ ಮನೆಯ ಬಳಿಗೆ ನಾನು ಬಂದಿದ್ದೇನೆ ಎಂದು ಸಂತ್ರಸ್ಥೆ ಹೇಳಿಕೊಂಡಿದ್ದಾಳೆ. ಮಹಾನಾಯಕನಿಗೂ ಪ್ರಕರಣದ ಮಾಸ್ಟರ್ ಮೈಂಡ್‍ಗಳಿಗೂ ಇರುವ ಸಂಬಂಧವನ್ನು ರಾಜ್ಯ ಕಾಂಗ್ರೆಸ್ ಬಹಿರಂಗಗೊಳಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.