×
Ad

ಉಡುಪಿ ಜಿಲ್ಲೆಗೆ ರಂಗ ಮಂದಿರ ಅತಿ ಅಗತ್ಯ: ಪಿ.ಆರ್ಮುಗಂ

Update: 2021-03-27 20:08 IST

ಉಡುಪಿ, ಮಾ.27: ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ರಂಗ ಚಟು ವಟಿಕೆಗಳು ನಡೆಯುತ್ತಿರುವುದರಿಂದ ಇಲ್ಲಿಗೆ ರಂಗ ಮಂದಿರದ ಅಗತ್ಯ ಬಹಳಷ್ಟಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಶಾಸಕ ಬಳಿ ನಿಯೋಗ ತೆರಳಿ ಮನವಿ ಸಲ್ಲಿಸಬೇಕು ಎಂದು ಮೈಸೂರು ವಿಶ್ವಭಾರತಿ ನರ್ಸಿಂಗ್ ಕಾಲೇಜಿನ ಅಧ್ಯಕ್ಷ ಪಿ.ಆರ್ಮುಗಂ ಹೇಳಿದ್ದಾರೆ.

ಉಡುಪಿ ರಂಗಭೂಮಿ ವತಿಯಿಂದ ಎಂಜಿಎಂ ಕಾಲೇಜು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಶನಿವಾರ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಲಾದ ವಿಶ್ವರಂಗ ಭೂಮಿ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಅಧ್ಯಕ್ಷತೆಯನ್ನು ರಂಗಭೂಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ವಹಿಸಿ ದ್ದರು. ಈ ಸಂದರ್ಭದಲ್ಲಿ ಹಿರಿಯ ಪ್ರಸಾಧನ ಕಲಾವಿದ ಸೋಮನಾಥ ಚಿಟ್ಪಾಡಿ ಹಾಗೂ ಸಾಹಿತಿ, ಕಲಾವಿದ ಮೇಟಿ ಮುದಿಯಪ್ಪ ಅವರಿಗೆ ವಿಶ್ವರಂಗಭೂಮಿ ಗೌರವ ಸನ್ಮಾನ ಸಲ್ಲಿಸಲಾಯಿತು.

ಮುಖ್ಯ ಅತಿಥಿಗಳಾಗಿ ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಡಾ.ದೇವಿ ದಾಸ ಎಸ್.ನಾಯ್ಕ, ಸಿಂಡಿಕೇಟ್ ಬ್ಯಾಂಕ್ ಸ್ಟಾಫ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಕೆ.ಬಾಲಗಂಗಾಧರ ರಾವ್ ಶುಭ ಹಾರೈಸಿದರು. ರಂಗಭೂಮಿ ಉಪಾಧ್ಯಕ್ಷ ಭಾಸ್ಕರ ರಾವ್ ಕಿದಿಯೂರು, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಚಂದ್ರ ಕುತ್ಪಾಡಿ ಉಪಸ್ಥಿತರಿದ್ದರು.

ಉಪಾಧ್ಯಕ್ಷ ನಂದ ಕುಮಾರ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರಂಗಕರ್ಮಿ ಪ್ರಶಾಂತ್ ಉದ್ಯಾವರ ರಂಗ ಸಂದೇಶ ವಾಚಿಸಿದರು. ಶಿಲ್ಪಾ ಜೋಶಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಚೇರ್ಕಾಡಿ ಕೋಶಿಕಾ ತಂಡ ದಿಂದ ಕುದುರೆ ಬಂದು ಕುದುರೆ ನಾಟಕ ಪ್ರದರ್ಶನಗೊಂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News