ಹೆಜಮಾಡಿ: ಬೈಪಾಸ್ ಬಳಿ ಬ್ಯಾರಿಕೇಡ್ ಅಳವಡಿಕೆ

Update: 2021-03-27 15:54 GMT

ಪಡುಬಿದ್ರಿ : ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೆಜಮಾಡಿ ನಾಗರಿಕ ಕ್ರಿಯಾ ಸಮಿತಿ ವತಿಯಿಂದ ಬ್ಯಾರಿಕೇಡ್ ಅಳವಡಿಸಲಾಯಿತು.

ಶನಿವಾರ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಡುಬಿದ್ರಿ ಠಾಣಾಧಿಕಾರಿ ದಿಲೀಪ್ ಜಿ. ಆರ್ ಉದ್ಘಾಟಿಸಿ, ಹೆಜಮಾಡಿ ನಾಗರೀಕ ಕ್ರಿಯಾ ಸಮಿತಿ ಮಾಡುತ್ತಿರುವ ಕಾರ್ಯ ಶ್ಲಾಘನೀಯ. ಕ್ರಿಯಾ ಸಮೀತಿಯು ರಾಜಕೀಯ ರಹಿತವಾಗಿ ಸಮಾಜಮುಖಿ ಸೇವೆಯನ್ನು ಮಾಡುತ್ತಿರಲಿ. ಗ್ರಾಮದ ಅಭಿವೃದ್ಧಿ ಕಾರ್ಯಕ್ಕೆ ಪೊಲೀಸರ ಬೆಂಬಲ ಎಂದಿಗೂ ಇದೆ ಎಂದರು.

ಹೆಜಮಾಡಿ ಅಲ್ ಹಜರ್ ಆಂಗ್ಲ ಮಾಧ್ಯಮ ಶಾಲಾ ಸಂಚಾಲಕ ಹಾಜಿ ಸೇಕಬ್ಬ ಕೋಟೆ, ಕ್ರಿಯಾ ಸಮಿತಿಯ ಅಧ್ಯಕ್ಷ ಸುಧಾಕರ ಕರ್ಕೇರಾ, ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಹೆಜ್ಮಾಡಿ, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷ ರವಿ ಶೆಟ್ಟಿ, ಅಭಿನಂದನಾ ಸಮಿತಿಯ ಅಧ್ಯಕ್ಷ ರೋಲ್ಫಿ ಡಿಕೋಸ್ತಾ, ನವಯುಗ ಟೋಲ್ ವ್ಯವಸ್ಥಾಪಕ ಶಿವಪ್ರಸಾದ್ ರೈ, ರಮೀಜ್ ಹುಸೈನ್, ಸಮಿತಿಯ ಪ್ರಧಾನ ಕಾರ್ಯದರ್ಶಿ ಸನಾ ಇಬ್ರಾಹಿಂ, ಸೂಫಿ ಹೆಜ್ಮಾಡಿ, ಹೆಜಮಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ವಿಶಾಲಕ್ಷಿ ಪುತ್ರನ್, ವಾಮನ ಕೋಟ್ಯಾನ್ ನಡಿಕುದ್ರು, ಮತ್ತಿತರರು ಉಪಸ್ತಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News