×
Ad

ವಿಧಾನಸಭೆ ಚುನಾವಣೆ ಪ್ರಥಮ ಹಂತ: ಪ.ಬಂಗಾಳ 79.79%, ಅಸ್ಸಾಂ 72.14% ಮತದಾನ

Update: 2021-03-27 22:50 IST

ಹೊಸದಿಲ್ಲಿ, ಮಾ.27: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ನಡೆದ ಪ್ರಥಮ ಹಂತದ ಮತದಾನದಲ್ಲಿ 79.79% ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರೆ, ಅಸ್ಸಾಂನಲ್ಲಿ 72.14% ಮತದಾನವಾಗಿದೆ ಎಂದು ಮೂಲಗಳು ಹೇಳಿವೆ.

ಪ್ರಥಮ ಹಂತದಲ್ಲಿ ಪಶ್ಚಿಮ ಬಂಗಾಳದ 30 ಮತ್ತು ಅಸ್ಸಾಂನ 47 ಸ್ಥಾನಗಳಿಗೆ ಮತದಾನ ನಡೆದಿದೆ. ಇಂದು ಮತದಾನ ನಡೆದ 30 ಸ್ಥಾನಗಳ ಪೈಕಿ 26 ಸ್ಥಾನಗಳಲ್ಲಿ ಕಳೆದ ಚುನಾವಣೆಯಲ್ಲಿ ಟಿಎಂಸಿ ಅಭ್ಯರ್ಥಿಗಳು ಗೆದ್ದಿದ್ದರು. ಮತದಾನ ಬೆಳಿಗ್ಗೆ 7 ಗಂಟೆಗೆ ಆರಂಭವಾಗಿದ್ದು ಕೊರೋನ ಸೋಂಕಿನ ಶಿಷ್ಟಾಚಾರ ಪಾಲನೆಯ ಹಿನ್ನೆಲೆಯಲ್ಲಿ ಮತದಾನದ ಅವಧಿಯನ್ನು ಒಂದು ಗಂಟೆ ವಿಸ್ತರಿಸಲಾಗಿದೆ. ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News