ರಾಷ್ಟ್ರಪತಿ ಆರೋಗ್ಯ ಸ್ಥಿತಿ ಸ್ಥಿರ
Update: 2021-03-27 23:36 IST
ಮುಂಬೈ, ಮಾ. 27: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿರುವ ಆರ್ಮಿ ರಿಸರ್ಚ್ ಆ್ಯಂಡ್ ರೆಫರಲ್ ಆಸ್ಪತ್ರೆ, ಅವರ ಮುಂದಿನ ಆರೋಗ್ಯ ತಪಾಸಣೆಗೆ ಏಮ್ಸ್‌ಗೆ ಶಿಫಾರಸು ಮಾಡಲಾಗಿದೆ ಎಂದಿದೆ.
ಎದೆಯ ಅಸ್ವಸ್ಥತೆ ಕಾಣಿಸಿಕೊಂಡ ಬಳಿಕ ರಾಮನಾಥ್ ಕೋವಿಂದ್ ಅವರನ್ನು ಆರ್ಮಿ ರಿಸರ್ಚ್ ಆ್ಯಂಡ್ ರೆಫರಲ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ರಾಷ್ಟ್ರಪತಿ ಅವರನ್ನು ನಿರಂತರ ತಪಾಸಣೆಗೆ ಒಳಪಡಿಸಲಾಗಿತ್ತು ಹಾಗೂ ನಿಗಾದಲ್ಲಿ ಇರಿಸಲಾಗಿತ್ತು. ರಾಷ್ಟ್ರಪತಿ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಹಲವು ನಾಯಕರು ನಿನ್ನೆಯಿಂದ ವಿಚಾರಣೆ ನಡೆಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಅವರ ಆರೋಗ್ಯದ ಬಗ್ಗೆ ಅವರ ಪುತ್ರನಲ್ಲಿ ವಿಚಾರಿಸಿದ್ದಾರೆ. ಅಲ್ಲದೆ, ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ ಎಂದು ಪ್ರಧಾನ ಮಂತ್ರಿ ಅವರ ಕಚೇರಿ ಟ್ವೀಟ್ ಮಾಡಿದೆ.