×
Ad

ಬೊಂಡಾಲ ಚಾರಿಟೇಬಲ್ ಟ್ರಸ್ಟ್ ನಿಂದ ನೆರವು

Update: 2021-03-28 20:14 IST

ಮಂಗಳೂರು, ಮಾ.28: ಅನಾರೋಗ್ಯದಿಂದ ಬಳಲುತ್ತಿರುವ ಯಕ್ಷಗಾನ ಭಾಗವತ ಮತ್ತು ಪ್ರಸಂಗಕರ್ತ ಬೊಟ್ಟಿಕೆರೆ ಪುರುಷೋತ್ತಮ ಪೂಂಜಾರ ಚಿಕಿತ್ಸೆಗಾಗಿ ಬೊಂಡಾಲ ಚಾರಿಟೇಬಲ್ ಟ್ರಸ್ಟ್ ವತಿಯಿಂದ 25 ಸಾವಿರ ರೂ.ಆರ್ಥಿಕ ನೆರವನ್ನು ನೀಡಲಾಯಿತು.

ಮಂಗಳೂರಿನ ಶ್ರೀ ದುರ್ಗಾ ಫೆಸಿಲಿಟೀಸ್ ಆಡಳಿತ ನಿರ್ದೇಶಕ ಹಾಗೂ ಬೊಂಡಾಲ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ ನಿಧಿ ಹಸ್ತಾಂತರಿಸಿದರು.

ಈ ಸಂದರ್ಭ ಯಕ್ಷಾಂಗಣ ಮಂಗಳೂರು ಕಾರ್ಯಾಧ್ಯಕ್ಷ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಮತ್ತು ಪೂಂಜಾರ ಪತ್ನಿ ಶೋಭಾ ಪೂಂಜಾ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News