ಗಾಂಜಾ ಸೇವನೆ: ಇಬ್ಬರು ವಶಕ್ಕೆ

Update: 2021-03-28 15:45 GMT

ಗಂಗೊಳ್ಳಿ, ಮಾ.28: ತ್ರಾಸಿ ಬೀಚ್‌ನಲ್ಲಿ ಮಾ.25ರಂದು ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರನ್ನು ಗಂಗೊಳ್ಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮೇಲ್‌ಗಂಗೊಳ್ಳಿಯ ನರೇಂದ್ರ(20) ಹಾಗೂ ಮಂಗಳೂರು ಕುಪ್ಪೆ ಪದವು ನಿವಾಸಿ ತೌಫೀಕ್(24) ಎಂಬವರನ್ನು ಪೊಲೀಸರು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಫಾರೆನ್ಸಿಕ್ ಮೆಡಿಸಿನ್ ವಿಭಾಗದ ತಜ್ಞರ ಮುಂದೆ ಹಾಜರುಪಡಿಸಿ ವೈದ್ಯಕೀಯ ಪರೀಕ್ಷೆ ನಡೆಸಿದ್ದು, ಇದರಲ್ಲಿ ಆರೋಪಿ ಗಳಿಬ್ಬರು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.

ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News