×
Ad

ಕುಂದಾಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಭಿನಂದನಾ ಸಮಾರಂಭ

Update: 2021-03-28 21:19 IST

ಕುಂದಾಪುರ, ಮಾ.28:ಕೋಟೇಶ್ವರ ಜಿಪಂ ವ್ಯಾಪ್ತಿಯ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿದವರ ಮತ್ತು ವಿಜೇತರ ಅಭಿನಂದನಾ ಸಮಾರಂಭ ರವಿವಾರ ಕುಂದಾಪುರದ ಆರ್.ಎನ್.ಶೆಟ್ಟಿ ಸಭಾಂಗಣದಲ್ಲಿ ನಡೆಯಿತು.

ವಿಧಾನಪರಿಷತ್‌ನ ಮಾಜಿ ಸಭಾಪತಿ ಹಾಗೂ ಕಾಂಗ್ರೆಸ್ ಮುಖಂಡರಾದ ಕೆ.ಪ್ರತಾಪ್‌ಚಂದ್ರ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಗೆದ್ದವರಿಗೆ ಅಭಿನಂದನೆ ಹೇಳುವುದು, ಸೋತವರಿಗೆ ಸಾಂತ್ವ ಹೇಳಿ ಕಾರ್ಯಕರ್ತರ ಬೆನ್ನೆಲುಬಾಗಿ ನಿಲ್ಲುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡಿಕೊಂಡು ಬಂದಿದೆ ಎಂದರು.

ತಾಪಂ, ಜಿಪಂ, ವಿಧಾನಸಭೆ, ವಿಧಾನಪರಿಷತ್,ಲೋಕಸಭೆ ಈ ಎಲ್ಲಾ ಚುನಾವಣೆಯಲ್ಲಿ ಹಣದ ಪ್ರಭಾವ ಬೀರುತ್ತದೆ. ಹಣ ಖರ್ಚು ಮಾಡಿದರೆ ಮಾತ್ರ ಗೆಲ್ಲಲು ಸಾಧ್ಯ. ಆದರೆ ಗ್ರಾಪಂ ಚುನಾವಣೆಯಲ್ಲಿ ಹಣದ ಪ್ರಭಾವ ಅಷ್ಟಿರುವುದಿಲ್ಲ. ಇಲ್ಲಿ ಅಭ್ಯರ್ಥಿಯ ಶ್ರಮ, ನಿಮ್ಮ ಸೇವಾ ಮನೋಭಾವ, ಜನರೊಂದಿಗೆ ಸ್ಪಂದಿಸಿದ ರೀತಿ, ನೀವು ಜನರಲ್ಲಿ ಇಟ್ಟಂತಹ ಬಾಂಧವ್ಯ ಇವುಗಳ ಮೇಲೆ ಚುನಾವಣೆ ನಡೆಯುತ್ತದೆ ಎಂದು ಗ್ರಾಪಂ ಸದಸ್ಯರನ್ನು ಹುರಿದುಂಬಿಸಿದರು.

ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಅಧ್ಯಕ್ಷತೆ ವಹಿಸಿ ದ್ದರು. ಈ ಸಂದರ್ಭದಲ್ಲಿ ಕೋಟೇಶ್ವರ ಜಿಪಂ ವ್ಯಾಪ್ತಿಯ ಗ್ರಾಪಂ ಚುನಾವಣೆ ಯಲ್ಲಿ ಸ್ಪರ್ಧಿಸಿದವರನ್ನು ಹಾಗು ವಿಜೇತರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾಂಗ್ರೆಸ್ ಉಡುಪಿ ಜಿಲ್ಲಾ ಅಧ್ಯಕ್ಷ ಅಶೋಕ್ ಕುರ್ಮಾ ಕೊಡವೂರು, ಬ್ಲಾಕ್ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಜಿಲ್ಲಾ ಕಾಂಗ್ರೆಸಿನ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಪೂಜಾರಿ, ಕುಂದಾಪುರ ಅಲ್ಪಸಂಖ್ಯಾತ ಅಧ್ಯಕ್ಷ ಹಾರೂನ್ ಸಾಹೇಬ್, ಹಿರಿಯ ನಾಯಕರಾದ ಶಂಕರ ಪೂಜಾರಿ, ದೇವಾನಂದ ಶೆಟ್ಟಿ, ಜಾನಕಿ ಬಿಲ್ಲವ, ಕೋಣಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಕೃಷ್ಣದೇವ ಕಾರಂತ್, ಬಸ್ರೂರು ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ವಿಕಾಸ್ ಹೆಗ್ಡೆ, ಕೋಟೇಶ್ವರ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ರಾಜಶೇಖರ ಶೆಟ್ಟಿ, ಆನಗಳ್ಳಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರು ಗಂಗಾರ್ಧ ಶೆಟ್ಟಿ, ಕಂದಾವರ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರು ಶೀನ ಪೂಜಾರಿ ಉಪಸ್ಥಿತರಿದ್ದರು.

  ಬಳ್ಕೂರು ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಜ್ಯೋತಿ ಪುತ್ರನ್, ಹಂಗಳೂರು ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಸ್ಟೀವನ್, ಆನಗಳ್ಳಿ ಗ್ರಾಪಂ ಅಧ್ಯಕ್ಷ ಲಾರೆನ್ಸ್ ಡಿಸೋಜ, ಕೋಣಿ ಗ್ರಾಪಂ ಅಧ್ಯಕ್ಷೆ ವಸಂತಿ ಮೊಗವೀರ, ಕಾವ್ರಾಡಿ ಗ್ರಾಪಂ ಅಧ್ಯಕ್ಷ ವಿಜಯಪುತ್ರನ್, ಮಹಿಳಾ ಕಾಂಗ್ರೆಸ್‌ನ ದೇವಕಿ ಸಣ್ಣಯ್ಯ, ಚಂದ್ರ ಅಮೀನ್, ವೀರೇಂದ್ರ ಬಿದ್ಕಲ್‌ಕಟ್ಟೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News