ಬಜ್ಪೆ: ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫಾರಂ ವತಿಯಿಂದ ರಕ್ತದಾನ ಶಿಬಿರ
ಬಜ್ಪೆ : ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಬಜ್ಪೆ ಹಾಗೂ ಕೆಎಂಸಿ ಆಸ್ಪತ್ರೆ ಇದರ ಸಹಭಾಗಿತ್ವದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರವು ಬಜ್ಪೆಯ ಅನ್ಸಾರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮವು ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಬಜ್ಪೆ ಗೌರವಾಧ್ಯಕ್ಷ ಅಬ್ದುಲ್ ಕಾದರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಪಿಎಫ್ಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಸಮೀರ್ ಮಾತನಾಡಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದ.ಕ ಜಿಲ್ಲಾದ್ಯಂತ ಇದುವರೆಗೂ ಸಾವಿರಕ್ಕಿಂತಲೂ ಹೆಚ್ಚು ರಕ್ತದಾನ ಶಿಬಿರಗಳನ್ನು ಹಮ್ಮಿಕೊಂಡಿದೆ ಹಾಗೂ ಇನ್ನು ಮುಂದೆಯೂ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದೇವೆ ಎಂದು ಹೇಳಿದರು.
ಮತ್ತೊರ್ವ ಮುಖ್ಯ ಅತಿಥಿ ಕೆಎಂಸಿ ಆಸ್ಪತ್ರೆಯ ಡಾ. ಮಾನ್ಸಿ ಮಾತನಾಡಿ ರಕ್ತದಾನದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಬ್ಲಡ್ ಡೋನರ್ಸ್ ಫಾರಂ ಬಜ್ಪೆ ಘಟಕಾಧ್ಯಕ್ಷ ಝಾಕೀರ್, ಉಪಾಧ್ಯಕ್ಷ ಶರೀಫ್ ಪಯಣಿಗ, ಕೋಶಾಧಿಕಾರಿ ಅಬ್ದುಲ್ ರಹ್ಮಾನ್ ಉಪಸ್ಥಿತರಿದ್ದರು. ಬ್ಲಡ್ ಡೋನರ್ಸ್ ಫೋರಂ ಪ್ರಧಾನ ಕಾರ್ಯದರ್ಶಿ ಮುಸ್ತಫಾ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ಶಿಬಿರದಲ್ಲಿ 125 ಯುನಿಟ್ ರಕ್ತ ಸಂಗ್ರಹಿಸಲಾಯಿತು.