ಐಪಿಎಲ್-2021: ಎಂಐ ತಂಡಕ್ಕೆ ಸೇರಲು ರೋಹಿತ್ ಶರ್ಮಾ ಮುಂಬೈಗೆ
ಮುಂಬೈ: ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಸೇರಲು ನಾಯಕ ರೋಹಿತ್ ಶರ್ಮಾ ಸೋಮವಾರ ಇಲ್ಲಿಗೆ ಆಗಮಿಸಿದ್ದಾರೆ.
ಮೂರನೇ ಏಕದಿನ ಪಂದ್ಯದಲ್ಲಿ ಭಾರತ ರವಿವಾರ ಏಳು ರನ್‌ಗಳಿಂದ ಇಂಗ್ಲೆಂಡ್ ತಂಡವನ್ನು ಮಣಿಸಿ ಮೂರು ಪಂದ್ಯಗಳ ಸರಣಿಯನ್ನು 2-1ರಿಂದ ಗೆದ್ದುಕೊಂಡಿತು. ಭಾರತದ ಉಪನಾಯಕ ರೋಹಿತ್ ಇಂಗ್ಲೆಂಡ್ ಸರಣಿಯಲ್ಲಿ ಟೆಸ್ಟ್, ಟ್ವೆಂಟಿ-20 ಮತ್ತು ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಈಗ ಮುಂಬರುವ ಐಪಿಎಲ್‌ಗಾಗಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೇರಿದ್ದಾರೆ.
ಪಾಂಡ್ಯ ಸಹೋದರರು (ಹಾರ್ದಿಕ್ ಮತ್ತು ಕ್ರನಾಲ್), ಮತ್ತು ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ತಂಡದ ಆಟಗಾರರು. ಅವರು ಕೂಡಾ ಬಂದಿದ್ದಾರೆ.
ಮುಂಬೈ ಇಂಡಿಯನ್ಸ್‌ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಸೂರ್ಯಕುಮಾರ್ ಹೇಳಿದ್ದಾರೆ.
ಐಪಿಎಲ್ ಟೂರ್ನಿ ಎಪ್ರಿಲ್ 9ರಿಂದ ಪ್ರಾರಂಭವಾಗಲಿದೆ. ಟೂರ್ನಮೆಂಟ್ ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಹಣಾಹಣಿ ನಡೆಸಲಿವೆ.
ಇಂಗ್ಲೆಂಡ್ ವಿರುದ್ಧದ ಮೂರು ಏಕದಿನ ಪಂದ್ಯಗಳಲ್ಲಿ ರೋಹಿತ್ 90 ರನ್ ಗಳಿಸಿದ್ದಾರೆ.
ಸೂರ್ಯಕುಮಾರ್ ಇಂಗ್ಲೆಂಡ್ ವಿರುದ್ಧದ ಟ್ವೆಂಟಿ-20 ಸರಣಿಯಲ್ಲಿ ಭಾರತದ ಪರ ಪಾದಾರ್ಪಣೆ ಮಾಡಿದರು. ನಾಲ್ಕನೇ ಮತ್ತು ಐದನೇ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದರು. ಏಕದಿನ ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು. ಆದರೆ ಅವರಿಗೆ ಅವಕಾಶ ಸಿಗಲಿಲ್ಲ. ಮೂರನೇ ಏಕದಿನ ಪಂದ್ಯದಲ್ಲಿ ಹಾರ್ದಿಕ್ 64 ರನ್ ಗಳಿಸಿದರು. ಕೃನಾಲ್ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ಆಡುವ ಮೂಲಕ ಚೊಚ್ಚಲ ಪಂದ್ಯದಲ್ಲಿ ಅರ್ಧಶತಕ ಗಳಿಸಿದರು.