ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ
Update: 2021-03-30 15:52 IST
ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಂಗಳಾ ಸುರೇಶ್ ಅಂಗಡಿ ಅವರು ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿಯೂ ಆದ ಡಾ. ಕೆ.ಹರೀಶ್ ಕುಮಾರ್ ಅವರಿಗೆ ಮಂಗಳವಾರ ನಾಮಪತ್ರ ಸಲ್ಲಿಸಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ, ಸಂಸದರೂ ಆದ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕರಾದ ಅಭಯ್ ಪಾಟೀಲ್, ಅನಿಲ್ ಬೆನಕೆ, ದುರ್ಯೋಧನ ಐಹೊಳೆ, ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಈ ಸಂದರ್ಭ ಉಪಸ್ಥಿತರಿದ್ದರು.
ಕೇಂದ್ರದ ಮಾಜಿ ಸಚಿವರಾದ ದಿ. ಸುರೇಶ್ ಅಂಗಡಿ ಅವರು ಬೆಳಗಾವಿ ಕ್ಷೇತ್ರದಲ್ಲಿ ಮಾಡಿದ ಜನಪರ ಕಾರ್ಯಗಳನ್ನು ಮುಂದುವರಿಸಲು ಹಾಗೂ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸಲು ಮತದಾರರು ಬೆಂಬಲ ನೀಡಲಿದ್ದಾರೆ ಎಂದು ಮಂಗಳಾ ಸುರೇಶ್ ಅಂಗಡಿ ಅವರು ವಿಶ್ವಾಸ ವ್ಯಕ್ತಪಡಿಸಿದರು.