×
Ad

ಕೋಟ್ಪಾ ಕಾಯ್ದೆ ಉನ್ನತ ಅನುಷ್ಠಾನ ಜಿಲ್ಲೆಯಾಗಿ ದ.ಕ.: ಡಿಸಿ ಘೋಷಣೆ

Update: 2021-03-30 20:08 IST

ಮಂಗಳೂರು, ಮಾ.30: ದ.ಕ.ಜಿಲ್ಲೆಯು 2015ರಿಂದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮವು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸುವಲ್ಲಿ ರಾಜ್ಯದಲ್ಲಿಯೇ ಮುಂಚೂಣಿಯಲ್ಲಿದೆ. ಈ ಹಿಂದೆ ಜಿಲ್ಲಾ ತಂಬಾಕು ನಿಯಂತ್ರಣ ಸಮನ್ವಯ ಸಮಿತಿಯನ್ನು ರಚಿಸಿ ತ್ರೈಮಾಸಿಕ ಸಭೆಗಳನ್ನು ನಡೆಸಿದ ಪರಿಣಾಮ ಜಿಲ್ಲೆಯು ಕೋಟ್ಪಾ ಉನ್ನತ ಅನುಷ್ಠಾನ ಜಿಲ್ಲೆಯಾಗಿ ಗುರುತಿಸಲ್ಪಟ್ಟಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಂಬಾಕು ನಿಯಂತ್ರಣ ಘಟಕದ ವತಿಯಿಂದ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ದ.ಕ.ಜಿಲ್ಲೆಯನ್ನು ‘ಕೋಟ್ಪಾ ಕಾಯ್ದೆಯ ಉನ್ನತ ಅನುಷ್ಠಾನ ಜಿಲ್ಲೆ’ ಎಂದು ಘೋಷಿಸಿ ಅವರು ಮಾತನಾಡಿದರು.

ಜಿಲ್ಲೆಯ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಕೋಟ್ಪಾಸೆಕ್ಷನ್-4ರಂತೆ ಧೂಮಪಾನ ನಿಷೇಧಿತ ಪ್ರದೇಶ ಎಂಬ ನಾಮಫಲಕವನ್ನು ಅಳವಡಿಸಲಾ ಗಿದೆ ಹಾಗೂ ಶಾಲಾ-ಕಾಲೇಜು ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟದ ನಿಷೇಧದ ಬಗ್ಗೆ ಕ್ರಮ ವಹಿಸಲಾಗಿದೆ ಎಂದ ಡಿಸಿ, ಕಳೆದ ಎರಡು ವರ್ಷಗಳಲ್ಲಿ 1,197 ಪ್ರಕರಣಗಳನ್ನು ದಾಖಲಿಸಿ 1,73,020 ರೂ. ದಂಡ ವಸೂಲಿ ಮಾಡಲಾಗಿದೆ. 500 ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸ ಲಾಗಿದೆ ಎಂದರು.

ಜಿಲ್ಲೆಯಲ್ಲಿ ಈಗಾಗಲೇ 1,822 ಶಾಲಾ-ಕಾಲೇಜುಗಳನ್ನು ತಂಬಾಕು ಮುಕ್ತ ಎಂದು ಘೋಷಿಸಲಾಗಿದೆ. ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ತಂಬಾಕು ವ್ಯಸನ ಮುಕ್ತ ಕೇಂದ್ರವನ್ನು ಆರಂಭಿಸಲಾಗಿದೆ. ಕಳೆದ ಎರಡು ವರ್ಷಗಳಲ್ಲಿ 1,650 ತಂಬಾಕು ವ್ಯಸನಿಗಳಿಗೆ ಚಿಕಿತ್ಸೆ ಹಾಗೂ ಆಪ್ತ ಸಮಾಲೋಚನೆಯನ್ನು ಉಚಿತವಾಗಿ ನೀಡಲಾಗಿದೆ. ಬೀದಿ ನಾಟಕ, ಗೋಡೆ ಬರಹಗಳ ಮೂಲಕ ಮಾಹಿತಿ, ಶಿಕ್ಷಣ, ಸಂವಹನ ಕಾರ್ಯಕ್ರಮ ಗಳನ್ನು ಸಾರ್ವಜನಿಕವಾಗಿ ನಡೆಸಿ ಜನಜಾಗೃತಿ ಮೂಡಿಸಲಾಗಿದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ. ಜೆ. ರೂಪಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯಾರಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಲ್ಲೇಸ್ವಾಮಿ, ಕಾರ್ಮಿಕ ಇಲಾಖಾಧಿಕಾರಿ ವಿಲ್ಮಾ ತಾವ್ರೋ, ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಕುಮಾರ್, ಅಬಕಾರಿ ಅಧೀಕ್ಷಕಿ ಗೀತಾ.ಪಿ, ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News