ಕೋವಿಡ್ ಮಾರ್ಗಸೂಚಿ ಪಾಲಿಸದ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ: ಉಡುಪಿ ಜಿಲ್ಲಾಧಿಕಾರಿ
ಉಡುಪಿ, ಮಾ.30: ಎಂಐಟಿ, ಕುಂಜಾರುಗಿರಿ, ಕಾರ್ಕಳ ಹಾಗೂ ಶಂಕರ ನಾರಾಯಣಗಳ ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚಿನ ಕೋವಿಡ್ ಪ್ರಕರಣಗಳು ದಾಖಲಾಗಿರುವುದರಿಂದ ಅಲ್ಲಿ ಕೋವಿಡ್ ಮಾರ್ಗಸೂಚಿ ಸರಿಯಾಗಿ ಪಾಲನೆ ಮಾಡದಿರುವುದು ಕಂಡು ಬರುತ್ತಿದೆ. ಆದುದರಿಂದ ಸರಕಾರಿ ಅಥವಾ ಖಾಸಗಿ ಶಿಕ್ಷಣ ಸಂಸ್ಥೆಗಳು ಸರಿಯಾಗಿ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡದಿದ್ದರೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರಗಿಸಲಾಗು ವುದೆಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.
ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎರಡು ದಿನಗಳ ಹಿಂದೆ ಪರಿಷ್ಕರಿಸಲಾದ ಕೋವಿಡ್ ಮಾರ್ಗಸೂಚಿಯಲ್ಲಿ ಹಬ್ಬಗಳಂತೆ ಜಾತ್ರೆ ಮತ್ತು ಉತ್ಸವಗಳನ್ನು ಕೂಡ ಸಾರ್ವಜನಿಕವಾಗಿ ಆಚರಿ ಸಲು ಅವಕಾಶ ಇಲ್ಲ. ಆದುದರಿಂದ ಜಾತ್ರೆ ಹಾಗೂ ಉತ್ಸವಗಳು ಕೇವಲ ಧಾರ್ಮಿಕ ಕಾರ್ಯಕ್ರಮಗಳಿಗೆ ಮಾತ್ರ ಸೀಮಿತ ಆಗಿರಬೇಕೆಂದು ಸಂಬಂಧಪಟ್ಟರಿಗೆ ಸೂಚನೆ ನೀಡಲಾಗಿದೆ ಎಂದರು.
ಪಾಸಿಟಿವಿಟಿ ಪ್ರಮಾಣ ಏರಿಕೆ
ಕೋವಿಡ್ ಪ್ರಕರಣದಲ್ಲಿ ಮಣಿಪಾಲದ ಎಂಐಟಿ ಹೊರತು ಪಡಿಸಿ ಜಿಲ್ಲೆಯ ಪರಿಸ್ಥಿತಿ ಇತರ ಜಿಲ್ಲೆಗಳಿಗಿಂತ ಉತ್ತಮವಾಗಿದೆ. ಎಂಐಟಿಯಲ್ಲಿ ಶೇ.15ರಷ್ಟು ಪಾಸಿಟಿವಿ ಪ್ರಮಾಣ ಇದ್ದರೆ, ಅದರ ಹೊರತು ಪಡಿಸಿ ಜಿಲ್ಲೆಯಲ್ಲಿ ಕೇವಲ ಶೇ.2ರಷ್ಟು ಪಾಸಿಟಿವಿಟಿ ಪ್ರಮಾಣ ಇದೆ. ಆದುದರಿಂದ ಯಾರು ಆತಂಕ ಪಡಬೇಕಾದ ಅಗತ್ಯ ಇಲ್ಲ. ಆದರೆ ಪಾಸಿಟಿವಿಟಿ ಪ್ರಮಾಣ ಕ್ರಮೇಣ ಏರಿಕೆ ಯಾಗುತ್ತಿರುವುದರಿಂದ ಎಚ್ಚರ ವಹಿಸುವುದು ಅತೀ ಅಗತ್ಯ ಎಂದು ಅವರು ಹೇಳಿದರು.
ಯಕ್ಷಗಾನ, ಸಿನೆಮಾ, ನಾಟಕಗಳನ್ನು ಸದ್ಯಕ್ಕೆ ನಿಷೇಧ ಮಾಡಿಲ್ಲ. ಅಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲನೆ ಮಾಡುವಂತೆ ಸೂಚನೆ ನೀಡಲಾ ಗಿದೆ. ಯಾವುದೇ ಕಾರ್ಯಕ್ರಮ ಆಯೋಜಿಸಿದರೂ ಅಲ್ಲಿ ಕೋವಿಡ್ ನಿಯಮ ಉಲ್ಲಂಘನೆಯಾದರೆ ಆ ಸ್ಥಳದ ಮಾಲಕರ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದು ಕೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಮರೀನಾ ನಿರ್ಮಾಣದ ಬಗ್ಗೆ ಜಿಲ್ಲಾಡಳಿತ ಯಾವುದೇ ನಿರ್ಧಾರ ತೆಗೆದು ಕೊಂಡಿಲ್ಲ. ಗೋವಾದ ಖಾಸಗಿ ಸಂಸ್ಥೆಯೊಂದು ಬಂದು ಮರೀನಾ ನಿರ್ಮಾಣ ದ ಬಗ್ಗೆ ವಿಸ್ಕೃತ ವಿವರವನ್ನು ಪ್ರಸ್ತುತ ಪಡಿಸಿದೆ. ಅದು ಬಿಟ್ಟು ಈ ಯೋಜನೆಗೆ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.
ಮಣಿಪಾಲದ ಅಪಾರ್ಟ್‌ಮೆಂಟ್ ಸೀಲ್‌ಡೌನ್
ಮಣಿಪಾಲ ಎಂಐಟಿಯ ಎಲ್ಲ ವಿದ್ಯಾರ್ಥಿಗಳನ್ನು ಪರೀಕ್ಷೆ ಮಾಡಲಾಗಿದೆ. ಇದೀಗ ಹೊರ ಭಾಗದಲ್ಲಿ ನೆಲೆಸಿರುವ ವಿದ್ಯಾರ್ಥಿಗಳನ್ನು ಪರೀಕ್ಷಿಸ ಲಾಗುತ್ತಿದೆ. ಅದರಿಂದ 10ಕ್ಕಿಂತ ಹೆಚ್ಚು ಪ್ರಕರಣ ಕಂಡು ಬಂದ ಮಣಿಪಾಲದ ಮಾಂಡವಿ ಅಪಾರ್ಟ್‌ಮೆಂಟ್‌ನ್ನು ಸೀಲ್‌ಡೌನ್ ಮಾಡಿ ಕಂಟೈನ್ ಮೆಂಟ್ ವಲಯ ಎಂಬುದಾಗಿ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಈವರೆಗೆ ಜಿಲ್ಲೆಯಲ್ಲಿ ಒಟ್ಟು ಮೂರು ಪ್ರದೇಶಗಳನ್ನು ಕಂಟೈನ್‌ಮೆಂಟ್ ವಲಯ ಎಂಬುದಾಗಿ ಘೋಷಿಸಲಾಗಿದೆ. ಇದೀಗ ಬಫರ್ ರೆನ್‌ಗಳಲ್ಲಿ ರುವ ಎಲ್ಲರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಅಲ್ಲಿಯೂ ಸಾಕಷ್ಟು ಪ್ರಕರಣಗಳು ಕಂಡುಬರುತ್ತಿವೆ. ಆದುದರಿಂದ ಮಣಿಪಾಲ ದಲ್ಲಿ ವ್ಯಾಪಾರ ವಹಿವಾಟು ಮಾಡುವಾಗ ಸಾರ್ಜನಿಕರು ಸಾಕಷ್ಟು ಎಚ್ಚರಿಕೆ ವಹಿಸ ಬೇಕು. ಎಂದು ಅವರು ಮನವಿ ಮಾಡಿದರು.
ಉಡುಪಿ ಉತ್ಸವಕ್ಕೆ ಅನುಮತಿ ನಿರಾಕರಣೆ
ನಗರದ ಕಲ್ಸಂಕ ರಾಯಲ್ ಗಾರ್ಡನ್‌ನಲ್ಲಿ ನಡೆಸಲು ಉದ್ದೇಶಿಸಿರುವ ಉಡುಪಿ ಉತ್ಸವಕ್ಕೆ ಅನುಮತಿ ನಿರಾಕರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.
ಈ ಸಂಬಂಧ ಬಂದ ಅರ್ಜಿಗಳನ್ನು ಕೂಡ ವಜಾಗೊಳಿಸಲಾಗಿದೆ. ಅನು ಮತಿ ಇಲ್ಲದೆಯೇ ಈಗಾಗಲೇ ಖಾಸಗಿ ಜಾಗದಲ್ಲಿ ಉಡುಪಿ ಉತ್ಸವಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಲಾಗಿದೆ. ಆದರೆ ಕೋವಿಡ್ ಹೆಚ್ಚಾಗಿರುವುದರಿಂದ ನಾವು ಅದಕ್ಕೆ ಅವಕಾಶ ಕೊಡುವುದಿಲ್ಲ. ಅವರು ಸೆಟ್ ಮಾಡಿ ದ್ದರೆ ಅದನ್ನು ವಾಪಾಸ್ಸು ತೆಗೆದುಕೊಂಡು ಹೋಗಬೇಕು ಎಂದರು.