ಜೆಡಿಎಸ್ ಹಿರಿಯ ನಾಯಕ ಪಿಜಿಆರ್ ಸಿಂಧ್ಯಾ ಕಾಂಗ್ರೆಸ್ ಸೇರ್ಪಡೆ

Update: 2021-03-30 15:25 GMT

ಬಸವಕಲ್ಯಾಣ, ಮಾ.30: ಬಸವಕಲ್ಯಾಣದಲ್ಲಿ ಮಂಗಳವಾರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಲ್ಲಮ್ಮ ಬಿ. ನಾರಾಯಣರಾವ್ ಪರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಜೆಡಿಎಸ್ ಹಿರಿಯ ನಾಯಕ, ಮಾಜಿ ಸಚಿವ ಪಿಜಿಆರ್ ಸಿಂಧ್ಯಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್, ಈಶ್ವರ ಖಂಡ್ರೆ, ಮಾಜಿ ಸಚಿವ ಝಮೀರ್ ಅಹ್ಮದ್ ಖಾನ್ ಸೇರಿದಂತೆ ಇನ್ನಿತರರು ಪಕ್ಷದ ಧ್ವಜ ನೀಡುವ ಮೂಲಕ ಸಿಂಧ್ಯಾ ಅವರನ್ನು ಪಕ್ಷಕ್ಕೆ ಬರ ಮಾಡಿಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News