ಮಂಗಳೂರು: ಮೀರ್ ಮುಹಿಯುದ್ದೀನ್ ನಿಧನ
Update: 2021-03-30 22:09 IST
ಮಂಗಳೂರು, ಮಾ.30: ನಗರದ ಜೆಪ್ಪು ನಿವಾಸಿ, ಜಮಾಅತೆ ಇಸ್ಲಾಮೀ ಹಿಂದ್‌ನ ಹಿರಿಯ ಸದಸ್ಯ ಮೀರ್ ಮುಹಿಯುದ್ದೀನ್ (85) ಮಂಗಳವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೃತರು ಪತ್ನಿ, ಮೂವರು ಪುತ್ರರು ಮತ್ತು ಮೂವರು ಪುತ್ರಿಯರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಜಮಾಅತೆ ಇಸ್ಲಾಮೀ ಹಿಂದ್‌ನ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಅವರು ಶಿಸ್ತಿನ ಬದುಕಿಗೆ ಹೆಸರುವಾಸಿಯಾಗಿದ್ದರು. ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಸೌಹಾರ್ದಕ್ಕೆ ಹೆಚ್ಚಿನ ಆದ್ಯತೆ ನೀಡಿ ಸ್ಥಳೀಯವಾಗಿ ಅಪಾರ ಮೆಚ್ಚುಗೆಗೆ ಪಾತ್ರರಾಗಿದ್ದರು.