ಅಂಜುಮನ್ ಇಂಜಿನೀಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಸ್ನೇಹಾಗೆ ಮೂರನೇ ರ್ಯಾಂಕ್

Update: 2021-03-30 16:57 GMT

ಭಟ್ಕಳ : ಇಲ್ಲಿನ ಪ್ರತಿಷ್ಠಿತ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಂಜುಮಾನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್‍ಮೆಂಟ್ (ಎಐಟಿಎಂ)ನ ಬಿಇ ಸಿವಿಲ್ ವಿಭಾಗದ ವಿದ್ಯಾರ್ಥಿನಿ ಸ್ನೇಹ ಪಾಂಡು ನಾಯ್ಕ 9.32 ಸಿಜಿಪಿಎ ಅಂಕ ಗಳಿಸಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ (ವಿಟಿಯು)  ಮೂರನೇ ರ್ಯಾಂಕ ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ ಎಂದು ಅಂಜುಮನ್ ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸಂದರ್ಭದಲ್ಲಿ ಮಾಧ್ಯಮಪ್ರತಿನಿಧಿಯೊಂದಿಗೆ ಮಾತನಾಡಿದ ಸ್ನೇಹ,  ವಿಶ್ವವಿದ್ಯಾಲಯದ 10 ಅಗ್ರಸ್ಥಾನಗಳಲ್ಲಿ ಸ್ಥಾನ ಪಡೆಯುವ ವಿಶ್ವಾಸವಿತ್ತು. ಆದರೆ ಮೂರನೆ ಸ್ಥಾನ ಪಡೆದಿರುವುದು ನನ್ನ ಜೀವನದ ಅತ್ಯಂತ ಸಂತೋಷದ ಕ್ಷಣವಾಗಿದೆ  ಎಂದು ತಿಳಿಸಿದ ಅವರು, ತನ್ನ ಯಶಸ್ಸಿಗೆ ಪೋಷಕರು ಮತ್ತು ಕಾಲೇಜು ಅಧ್ಯಾಪಕರ ಕಠಿಣ ಪರಿಶ್ರಮ, ಬೆಂಬಲ ಮತ್ತು ಸಹಕಾರ ಕಾರಣವಾಗಿದೆ. ಪ್ರಸ್ತುತ ಅವರು ಬೆಂಗಳೂರಿನ ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಎಂ.ಟೆಕ್ ಮಾಡುತ್ತಿದ್ದಾರೆ. 

ವಿದ್ಯಾರ್ಥಿನಿಯ ಸಾಧನೆಗೆ ಅಂಜುಮನ್ ಸಂಸ್ಥೆಯ ಅಧ್ಯಕ್ಷ ಮುಹಮ್ಮದ್ ಮುಝಮ್ಮಿಲ್ ಕಾಝಿಯಾ ಸೇರಿದಂತೆ ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News