×
Ad

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಟಾಕ್ಸಿ ಚಾಲಕ

Update: 2021-03-30 22:38 IST

ಬೆಂಗಳೂರು, ಮಾ.30: ಆರ್ಥಿಕ ಸಂಕಷ್ಟದಿಂದ ಬೇಸತ್ತು ಟಾಕ್ಸಿ ಚಾಲಕನೋರ್ವ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಆರೋಪ ಕೇಳಿಬಂದಿದೆ.

ಇಲ್ಲಿನ ಕೆಂಪೇಗೌಡ ಬಸ್ ನಿಲ್ದಾಣದ ಬಳಿ ಮಂಗಳವಾರ ಸಂಜೆ ಪ್ರತಾಪ್ ಎಂಬಾತ ಚಾಲಕ ಕಾರಿನೊಳಗೆ ಸ್ವಯಃ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಕಾರಿನಿಂದ ಹೊರಕ್ಕೆ ಹೊಗೆ ಬಂದ ಹಿನ್ನೆಲೆ ಸ್ಥಳೀಯರು ಆತನನ್ನು ರಕ್ಷಿಸಿ, ಸ್ಥಳೀಯ ಆಸ್ಪತ್ರೆಗೆ ಸಾಗಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News