ವೇಣೂರು ಗ್ರಾ.ಪಂ. ಚುನಾವಣೆ: 24 ಸ್ಥಾನಗಳಲ್ಲಿಯೂ ಬಿಜೆಪಿ ಬೆಂಬಲಿತರಿಗೆ ಗೆಲುವು

Update: 2021-03-31 13:37 GMT

ಬೆಳ್ತಂಗಡಿ: ವೇಣೂರು ಗ್ರಾಮ ಪಂಚಾಯತ್ ಆಡಳಿತ ಮಂಡಳಿಯ 24 ಸ್ಥಾನಗಳಿಗೆ ಮಾ.29 ರಂದು ನಡೆದ ಚುನಾವಣೆಯ ಅಂತಿಮ ಫಲಿತಾಂಶ ಪ್ರಕಟವಾಗಿದ್ದು, 24 ಸ್ಥಾನಗಳಲ್ಲಿಯೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಸಾಧಿಸುವ ಮೂಲಕ ಅಧಿಕಾರದ ಗದ್ದುಗೆ ಏರಿದ್ದಾರೆ.

ವೇಣೂರು ಗ್ರಾಮ ಪಂಚಾಯತದ 24 ಸ್ಥಾನಗಳಿಗೆ ಬಿಜೆಪಿ ಬೆಂಬಲಿತ 24ಮಂದಿ ಅಭ್ಯರ್ಥಿಗಳು, ಕಾಂಗ್ರೆಸ್ ಬೆಂಬಲಿತ 24 ಮಂದಿ ಅಭ್ಯರ್ಥಿಗಳು ಹಾಗೂ ಎಸ್.ಡಿ.ಪಿ.ಐ ಪಕ್ಷ ಬೆಂಬಲಿತರಾಗಿ 3ಮಂದಿ ಅಭ್ಯರ್ಥಿಗಳು ಸೇರಿದಂತೆ ಒಟ್ಟು 51 ಮಂದಿ ಅಭ್ಯರ್ಥಿಗಳು ಸ್ಪರ್ಧಿಸಿದ್ದರು.

ವೇಣೂರು 1 ಮತ್ತು 2ನೇ ವಾರ್ಡ್, ಬಜಿರೆ 1 ಮತ್ತು 2ನೇ ಕ್ಷೇತ್ರ, ಕರಿಮಣೇಲು 1ಮತ್ತು 2ನೇ ಕ್ಷೇತ್ರ ಹಾಗೂ ಮೂಡುಕೋಡಿ 1 ಮತ್ತು 2ನೇ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಎಲ್ಲಾ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅಧಿಕ ಮತಗಳನ್ನು ಪಡೆದು ಜಯ ಸಾಧಿಸಿದ್ದಾರೆ.

ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಪಕ್ಷ ಬೆಂಬಲಿತ ಅಭ್ಯರ್ಥಿಗಳೆಲ್ಲರೂ  ಸೋಲನ್ನು ಕಂಡಿದ್ದಾರೆ. ಒಂದೂ ಸ್ಥಾನ ಗೆಲ್ಲಲಾಗದ ಕಾಂಗ್ರಸ್ ತೀವ್ರ ಹಿನ್ನಡೆಯನ್ನು ಕಾಣುವಂತಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News