16 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ

Update: 2021-03-31 14:32 GMT

ಬೆಂಗಳೂರು, ಮಾ.31: ರಾಜ್ಯ ಸರಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಬುಧವಾರ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಸೇರಿದಂತೆ 16 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ರಾಜ್ಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ- ರಾಜೀವ್ ಚಾವ್ಲಾ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಡಳಿತಾಧಿಕಾರಿ-ರಾಕೇಶ್ ಸಿಂಗ್, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾಗಿ ಗೌರವ್ ಗುಪ್ತ(ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ).

ಇಂಧನ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ-ಜಿ.ಕುಮಾರ್ ನಾಯ್ಕ್(ಉನ್ನತ ಶಿಕ್ಷಣ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿಯಾಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ), ಮೌಲಸೌಕರ್ಯ ಅಭಿವೃದ್ಧಿ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ-ಕಪೀಲ್ ಮೋಹನ್, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ- ಎನ್.ಮಂಜುನಾಥ ಪ್ರಸಾದ್ (ವಿಪತ್ತು ನಿರ್ವಹಣೆ, ಭೂಮಿ ಹಾಗೂ ಯುಪಿಓಆರ್ ನ ಸರಕಾರದ ಪ್ರಧಾನ ಕಾರ್ಯದರ್ಶಿಯಾಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ).

ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ(ಎಂಎಸ್‍ಎಂಇ ಮತ್ತು ಗಣಿ)ಯ ಸರಕಾರದ ಕಾರ್ಯದರ್ಶಿ-ಪಂಕಜ್ ಕುಮಾರ್ ಪಾಂಡೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(ಇ-ಆಡಳಿತ)ಯ ಸರಕಾರದ ಕಾರ್ಯದರ್ಶಿ-ವಿ.ಪೊನ್ನುರಾಜ್, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕಿ- ಸಿಂಧು ಬಿ.ರೂಪೇಶ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿದೇರ್ಶಕಿ-ಎಸ್.ಹೊನ್ನಾಂಬ, ಸಕಾಲ ಮಿಷನ್ ಹೆಚ್ಚುವರಿ ಯೋಜನಾ ನಿರ್ದೇಶಕಿ- ಡಾ.ಬಿ.ಆರ್.ಮಮತಾ.

ಕರ್ನಾಟಕ ಸಾರ್ವಜನಿಕ ಭೂ ನಿಗಮದ ವ್ಯವಸ್ಥಾಪಕ ನಿರ್ದೇಶಕ- ಡಾ.ಎಚ್.ಎನ್.ಗೋಪಾಲಕೃಷ್ಣ(ಐಟಿಬಿಟಿ ಇಲಾಖೆಯ ನಿರ್ದೇಶಕರನ್ನಾಗಿ ಹೆಚ್ಚುವರಿ ಹೊಣೆ ವಹಿಸಲಾಗಿದೆ), ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ-ಜಿ.ಎಂ.ಗಂಗಾಧರಸ್ವಾಮಿ(ರಾಜ್ಯ ವಿದ್ಯುತ್ ಪ್ರಸರಣ ನಿಮಗದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಹೆಚ್ಚುವರಿ ಹೊಣೆ ವಹಿಸಲಾಗಿದೆ).

ತುಮಕೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕೆ.ವಿದ್ಯಾಕುಮಾರಿ, ಮೈಸೂರಿನ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕಯಾಗಿ ಜಯವಿಭವಸ್ವಾಮಿ(ಶ್ರೀ ಮಲೇಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಹೆಚ್ಚುವರಿ ಹೊಣೆ ವಹಿಸಲಾಗಿದೆ)ಯನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News