×
Ad

ಎ.4ಕ್ಕೆ ಮೋಹನ ಆಳ್ವರಿಗೆ ‘ವಿಶ್ವಪ್ರಭಾ’ ಪ್ರಶಸ್ತಿ ಪ್ರದಾನ

Update: 2021-03-31 20:32 IST

ಉಡುಪಿ, ಮಾ.31: ಇದೇ ಎ.3 ಮತ್ತು 4ರಂದು ಎಂಜಿಎಂ ಕಾಲೇಜಿನ ಮುದ್ದಣ್ಣ ಮಂಟಪದಲ್ಲಿ ಸಂಜೆ 5:45ಕ್ಕೆ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ವತಿಯಿಂದ ಎರಡು ದಿನ ಗಳ ‘ಸಂಸ್ಕೃತಿ ಉತ್ಸವ ’ ನಡೆಯಲಿದೆ.

ಎ.3ರ ಸಂಜೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯರಾದ ರಮೇಶ್ ಬೇಗಾರ್ ಸಂಸ್ಕೃತಿ ಉತ್ಸವವನ್ನು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಉಡುಪಿ ಶಾಸಕ ಕೆ. ರಘುಪತಿ ಭಟ್ ವಹಿಸಲಿದ್ದಾರೆ. ಪ್ರತಿಷ್ಠಾನದ ಸ್ಮರಣ ಸಂಚಿಕೆ ‘ಪ್ರಭಾವಳಿ’ಯನ್ನು ರವೀಂದ್ರ ಪೂಜಾರಿ ಬಿಡುಗಡೆಗೊಳಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಡಾ.ದೇವಿದಾಸ್ ಎಸ್.ನಾಯ್ಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕುಮಾರ್ ಬೆಕ್ಕೇರಿ ಉಪಸ್ಥಿತರಿರುತ್ತಾರೆ. ಸಭಾ ಕಾರ್ಯಕ್ರಮದ ನಂತರ ಶಿವಮೊಗ್ಗ ರಂಗಾಯಣದಿಂದ ‘ಚಾಣಕ್ಯ ಪ್ರಪಂಚ’ ನಾಟಕ ಪ್ರದರ್ಶನಗೊಳ್ಳಲಿದೆ.

ಎ.4ರಂದು ಮೂಡಬಿದ್ರೆಯ ಡಾ.ಎಂ.ಮೋಹನ್ ಆಳ್ವರಿಗೆ ಮೊದಲ ‘ವಿಶ್ವಪ್ರಭಾ’ ಪುರಸ್ಕಾರದೊಂದಿಗೆ ಒಂದು ಲಕ್ಷ ರೂ.ನಗದು ಬಹುಮಾನ ನೀಡಿ ಸನ್ಮಾನಿಸಲಾಗುವುದು. ಅಧ್ಯಕ್ಷತೆಯನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ವಹಿಸಲಿದ್ದು, ಪ್ರೊ.ಎಂ.ಎಲ್ ಸಾಮಗ ಅಭಿನಂದನಾ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ಬಸ್ತಿ ವಾಮನ ಶೆಣೈ, ತುಳುಕೂಟದ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ, ರಂಗಾಯಣದ ನಿರ್ದೇಶಕ ಸಂದೇಶ್ ಜವಳಿ ಉಪಸ್ಥಿತರಿರುವರು.

ಸಭಾ ಕಾರ್ಯಕ್ರಮದ ನಂತರ ಶಿವಮೊಗ್ಗ ರಂಗಾಯಣದ ನಾಟಕ ‘ಹಕ್ಕಿಕಥೆ’ ಪ್ರದರ್ಶನಗೊಳ್ಳಲಿದೆ ಎಂದು ವಿಶ್ವಪ್ರಭಾ ಪುರಸ್ಕಾರ ಸಮಿತಿಯ ಸಂಚಾಲಕ ಮರವಂತೆ ನಾಗರಾಜ್ ಹೆಬ್ಬಾ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News