ಬೆಂಕಿ ಅಕಸ್ಮಿಕ: ಗಾಯಾಳು ಮಹಿಳೆ ಮೃತ್ಯು
Update: 2021-03-31 23:18 IST
ಬ್ರಹ್ಮಾವರ, ಮಾ.31: ಬೆಂಕಿ ಆಕಸ್ಮಿಕದಿಂದ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಹಾರಾಡಿ ಗ್ರಾಮದ ಸಾಲಿಕೇರಿ ನಿವಾಸಿ ಉಷಾ ಬಿ. ಕೋಟ್ಯಾನ್ (58) ಎಂದು ಗುರುತಿಸಲಾಗಿದೆ. ಇವರು ಮಾ.16ರಂದು ರಾತ್ರಿ ಅಡುಗೆ ಮನೆಯಲ್ಲಿ ಗ್ಯಾಸ್ ಒಲೆಯ ಮೇಲೆ ಇರಿಸಿದ್ದ ಹಾಲಿನ ಪಾತ್ರೆಯನ್ನು ಕೆಳಗೆ ಇಳಿಸುವಾಗ ಅದರ ಬೆಂಕಿ ಆಕಸ್ಮಿಕವಾಗಿ ನೈಟಿಗೆ ತಾಗಿ ಬೆಂಕಿ ಹತ್ತಿಕೊಂಡಿತ್ತು. ಇದರಿಂದ ಗಂಭೀರವಾಗಿ ಸುಟ್ಟ ಗಾಯಗೊಂಡ ಇವರು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಾ.30ರಂದು ಮಧ್ಯಾಹ್ನ ವೇಳೆ ನಿಧನರಾದರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.