ಎ.3ರಿಂದ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗೆ ನಿಷೇಧಾಜ್ಞೆ ಜಾರಿ
Update: 2021-03-31 23:21 IST
ಉಡುಪಿ, ಮಾ.31: ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸಲ್ಪಡುವ 2020ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳು ಜಿಲ್ಲೆಯಲ್ಲಿ ಎಪ್ರಿಲ್ 3ರಿಂದ 5ರವರೆಗೆಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಇಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಪರೀಕ್ಷಾ ಕೇಂದ್ರದ ಸುತ್ತಲೂ ಇರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಹಾಗೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.