×
Ad

ಬೆಳ್ತಂಗಡಿ: ದನ ಕಳ್ಳತನದ ಆರೋಪ ಹೊರಿಸಿ ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

Update: 2021-04-01 13:23 IST
ದುಷ್ಕರ್ಮಿಗಳಿಂದ ಹಲ್ಲೆಗೊಳಗಾದವರು.

ಬೆಳ್ತಂಗಡಿ, ಎ.1: ಸವಣಾಲಿನಲ್ಲಿ ಪಿಕಪ್ ವಾಹನವನ್ನು ಅಡ್ಡಗಟ್ಟಿ ದನ ಕಳ್ಳತನದ ಆರೋಪ ಹೊರಿಸಿ ಅದರಲ್ಲಿದ್ದ ಇಬ್ಬರಿಗೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ರಾಜೇಶ್ ಭಟ್, ರಾಕೇಶ್ ಭಟ್, ಗುರುಪ್ರಸಾದ್, ಲೋಕೇಶ್ ಮತ್ತು ಚಿದಾನಂದ ಬಂಧಿತ ಆರೋಪಿಗಳಾಗಿದ್ದಾರೆ. ಇವರ ವಿಚಾರಣೆ ನಡೆಯುತ್ತಿದ್ದು ಹಲ್ಲೆಗೆ ಒಳಗಾದವರು ನೀಡಿರುವ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಕಲಂ 143, 147, 341, 504, 506, 323, 324, 326, 355, 427 ಜೊತೆಗೆ 149 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.

ಬಂಧಿತರ ಪೈಕಿ ರಾಜೇಶ್ ಭಟ್ ಕಾಂಗ್ರೆಸ್ ಕಾರ್ಯಕರ್ತನಾಗಿದ್ದು, ಕಳೆದ ಗ್ರಾಪಂ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದನೆನ್ನಲಾಗಿದೆ.

ಇದಲ್ಲದೆ ಪ್ರಕರಣಕ್ಕೆ ಸಂಬಂಧಿಸಿ ಇನ್ನೂ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News