×
Ad

ರಾಜ್ಯಪಾಲರಿಗೆ ಪತ್ರ: ಸಚಿವ ಈಶ್ವರಪ್ಪ ವಿರುದ್ಧ ಬೇಸರ ವ್ಯಕ್ತಪಡಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್

Update: 2021-04-01 17:03 IST

ಬೆಂಗಳೂರು, ಎ. 1: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದೂರು ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಕಾರ್ಯವೈಖರಿ ಬಗ್ಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಬೇಸರ ವ್ಯಕ್ತಪಡಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಕಾರ್ಯವೈಖರಿಯ ಬಗ್ಗೆ ಮತ್ತು ಹಣವನ್ನು ಮಂಜೂರು ಮಾಡಿರುವ ಬಗ್ಗೆ ನೇರವಾಗಿ ರಾಜ್ಯಪಾಲರಿಗೆ ದೂರನ್ನು ಸಲ್ಲಿಸಿರುವುದು ಸರಿಯಾದ ಕ್ರಮ ಅಲ್ಲ ಎಂದು ಬಿ.ಸಿ.ಪಾಟೀಲ್ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಯಾವುದೇ ವಿಷಯಗಳು ಇದ್ದರೂ ಅದನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲು ಅವಕಾಶವಿದೆ. ಹೀಗಿದ್ದರೂ ಸಂಪುಟ ಸಭೆಯಲ್ಲಿ ಯಾವುದೇ ವಿಷಯವನ್ನು ಸಚಿವ ಈಶ್ವರಪ್ಪನವರು ಪ್ರಸ್ತಾಪ ಮಾಡದೆ, ಈ ರೀತಿ ನೇರವಾಗಿ ಏಕಾಏಕಿ ರಾಜ್ಯಪಾಲರಿಗೆ ದೂರು ಸಲ್ಲಿಸುವುದು ಅವರಿಗೆ ಶೋಭೆ ತರುವಂತಹದ್ದಲ್ಲ. ಯಾವುದೇ ತಪ್ಪನ್ನು ಮಾಡದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಪ್ಪು ಮಾಡಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರಿಗೆ ದೂರು ನೀಡಿರುವುದು ಎಷ್ಟು ಸರಿ? ಎಂದು ಸಚಿವ ಬಿ.ಸಿ.ಪಾಟೀಲ್ ಪ್ರಕಟಣೆ ಮೂಲಕ ಪ್ರಶ್ನಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News