​ಹಾಜಿ ಹಸನ್ ಬಾವಾ

Update: 2021-04-01 12:41 GMT

ಮಂಗಳೂರು, ಎ.1: ಸುರತ್ಕಲ್ ಸಮೀಪದ ಇಡ್ಯಾ ನಿವಾಸಿ, ಸಮಾಜ ಸೇವಕ ಹಾಜಿ ಹಸನ್ ಬಾವಾ (72) ತನ್ನ ಸ್ವಗೃಹದಲ್ಲಿ ಗುರುವಾರ ಅನಾರೋಗ್ಯದಿಂದ ಮೃತಪಟ್ಟರು.

ಮೃತರು ಪತ್ನಿ, ಎಂಟು ಪುತ್ರಿಯರು ಮತ್ತು ಐವರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಸುರತ್ಕಲ್ ಮುಹಿಯ್ಯುದ್ದೀನ್ ಜುಮಾ ಮಸೀದಿ ಮತ್ತು ಕೊಳ್ನಾಡಿನ ಶಾಫಿ ಜುಮಾ ಮಸೀದಿಯ ಮಾಜಿ ಅಧ್ಯಕ್ಷರು ಹಾಗೂ ಮುಲ್ಕಿ ಶಾಫಿ ಜುಮಾ ಮಸೀದಿಯ ಮಾಜಿ ಉಪಾಧ್ಯಕ್ಷರಾಗಿದ್ದ ಇವರು ಖಿಲ್ರಿಯಾ ವಿದ್ಯಾ ಸಮಿತಿಯ ಅಧ್ಯಕ್ಷರಾಗಿ ಮತ್ತು ಜಮೀಯ್ಯತುಲ್ ಮುಅಲ್ಲಿಮೀನ್ ಸುರತ್ಕಲ್ ರೇಂಜ್‌ನ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಸುರತ್ಕಲ್ ಮದ್ರಸ ಮ್ಯಾನೇಜ್‌ಮೆಂಟ್‌ನ ಮಾಜಿ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ