×
Ad

ವಿಶ್ವೇಶ್ವರಯ್ಯ ತಾಂತ್ರಿಕ ವಿವಿ: ದಾವಣಗೆರೆಯ ಪ್ರಿಯಾಗೆ ಮೂರು ಚಿನ್ನದ ಪದಕ

Update: 2021-04-01 22:34 IST

ದಾವಣಗೆರೆ, ಎ.1: ಇತ್ತೀಚೆಗೆ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪವರ್ ಸಿಸ್ಟಮ್ ಇಂಜಿನಿಯರಿಂಗ್ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಇಲ್ಲಿಯ ವಿಶ್ವವಿದ್ಯಾಲಯದ ಬಿಡಿಟಿ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿನಿ ಪ್ರಿಯಾ ಎಂ.ಬಿ. ಅವರು ಪ್ರಥಮ ರ್‍ಯಾಂಕ್ ನೊಂನೊಂದಿಗೆ ಮೂರು ಚಿನ್ನದ ಪದಕಗಳನ್ನು ಗಳಿಸಿದ್ದಾರೆ.

ವಿಶ್ವವಿದ್ಯಾಲಯದ ಘಟಿಕೋತ್ಸವ ಎ,3ರಂದು ಬೆಳಗಾವಿಯಲ್ಲಿ ನಡೆಯಲಿದ್ದು, ಅಂದು ರಾಜ್ಯಪಾಲ ವಜುಭಾಯಿ ವಾಲಾ ಅವರಿಂದ ಪ್ರಿಯಾ ಪ್ರಶಸ್ತಿ ಪಡೆಯಲಿದ್ದಾರೆ. ಪ್ರಿಯಾ ಬಾಪೂಜಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂಜಿನಿಯಿಂಗ್ ಪದವಿ ಪಡೆದಿದ್ದರು. ಪ್ರಸ್ತುತ ಯುಬಿಡಿಟಿಯ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಓದಿದ್ದರು.

ಪ್ರಿಯಾ ಅವರು ಮೊದಲ ರ್‍ಯಾಂಕ್ ಜೊತೆಗೆ ಈ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ್ದಕ್ಕಾಗಿ ವಿಟಿಯು ಚಿನ್ನದ ಪದಕ, ರಾಷ್ಟ್ರೀಯ ಇಂಜಿನಿಯರಿಂಗ್ ಸಂಸ್ಥೆಯ ಬೆಳ್ಳಿ ಹಬ್ಬದ ಸ್ಮರಣಾರ್ಥ ಚಿನ್ನದ ಪದಕ ಮತ್ತು ದಿ. ಬಸವರಾಜ ಮುದ್ದೇಬಿಹಾಳ ಚಿನ್ನದ ಪದಕವನ್ನು ಪಡೆದಿದ್ದಾರೆ. ವಿದ್ಯಾರ್ಥಿನಿಯ ಸಾಧನೆಗೆ ಅವರ ಕಾಲೇಜಿನ ಸಿಬ್ಬಂದಿ ಮತ್ತು ಕುಟುಂಬದವರು ಅಭಿನಂದಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News