ಯುಪಿಎ ಮುಖ್ಯಸ್ಥರಾಗಿ ಶರದ್ ಪವಾರ್ ಆಯ್ಕೆಯಾಗಬೇಕೆಂದು ನಾನು ಎಲ್ಲಿಯೂ ಹೇಳಿಲ್ಲ ಎಂದ ರಾವತ್

Update: 2021-04-01 17:44 GMT

ಮುಂಬೈ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಅವರನ್ನು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ಬದಲಿಗೆ ಯುಪಿಎ ಅಧ್ಯಕ್ಷರನ್ನಾಗಿ ನೇಮಿಸಬೇಕೆಂದು ತಾನು ಎಂದಿಗೂ ಹೇಳಿಲ್ಲ ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಗುರುವಾರ ಹೇಳಿದ್ದಾರೆ

ರಾಷ್ಟ್ರಮಟ್ಟದಲ್ಲಿ ಸದ್ಯ  ಮೈತ್ರಿ ಮಾಡಿಕೊಳ್ಳಲು ಎಲ್ಲ ವಿರೋಧ ಪಕ್ಷಗಳು ಒಗ್ಗೂಡುವ ಅಗತ್ಯವಿದೆ ಎಂದು ಅವರು ಒತ್ತಿ  ಹೇಳಿದರು.

ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಅಧ್ಯಕ್ಷರಾಗಿ ಶರದ್ ಪವಾರ್ ಅಧಿಕಾರ ವಹಿಸಿಕೊಳ್ಳಬೇಕು ಎಂದು  ರಾವತ್ ಇತ್ತೀಚೆಗೆ ನೀಡಿದ್ದ ಸಲಹೆಗೆ ಮಹಾರಾಷ್ಟ್ರ ಕಾಂಗ್ರೆಸ್ ನಾಯಕರು ಟೀಕಿಸಿದ ಹಿನ್ನೆಲೆಯಲ್ಲಿ ರಾವತ್ ಸ್ಪಷ್ಟನೆ ನೀಡಿದ್ದಾರೆ..

"ಸೋನಿಯಾ ಗಾಂಧಿಯವರ ಬದಲಿಗೆ ಶರದ್ ಪವಾರ್ ಅವರನ್ನು ಯುಪಿಎ ಅಧ್ಯಕ್ಷರನ್ನಾಗಿ ಮಾಡಬೇಕೆಂದು ನಾನು ಎಂದೂ ಹೇಳಿಲ್ಲ. ದೇಶದ ಹಿತದೃಷ್ಟಿಯಿಂದ ಯುಪಿಎ ಅನ್ನು ಬಲಪಡಿಸುವ ಅವಶ್ಯಕತೆಯಿದೆ. ವಿರೋಧ ಪಕ್ಷದ ಮೈತ್ರಿಯನ್ನು ಬಲಪಡಿಸುವ ಅವಶ್ಯಕತೆಯಿದೆ ಎಂದು ನಾನು ಹೇಳಿದ್ದೇನೆ. ನಾನು ಸೋನಿಯಾ ಗಾಂಧಿ ಅಥವಾ ರಾಹುಲ್ ಗಾಂಧಿ ಅವರನ್ನು ಟೀಕಿಸಿಲ್ಲ "ಎಂದು ಸಂಜಯ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News