ದ.ಕ.ಜಿಲ್ಲೆ: 30 ಮಂದಿಗೆ ಕೊರೋನ ಪಾಸಿಟಿವ್
Update: 2021-04-01 23:28 IST
ಮಂಗಳೂರು, ಎ.1: ದ.ಕ.ಜಿಲ್ಲೆಯಲ್ಲಿ ಗುರುವಾರ 30 ಮಂದಿಯಲ್ಲಿ ಕೊರೋನ ಪಾಸಿಟಿವ್ ಧೃಢಪಡುವುದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 35,727 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ.
ಗುರುವಾರ 36 ಮಂದಿ ಚಿಕಿತ್ಸೆ ಪಡೆದು ಬಿಡುಗಡೆಗೊಂಡಿದ್ದಾರೆ. ಹಾಗಾಗಿ ಈವರೆಗೆ 34,421 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಂತಾಗಿದೆ. ಜಿಲ್ಲೆಯಲ್ಲಿ ಈವರೆಗೆ 6,33,114 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಆ ಪೈಕಿ 5,97,387 ಮಂದಿಯ ವರದಿ ನೆಗೆಟಿವ್ ಬಂದಿದೆ. ಅಲ್ಲದೆ 564 ಸಕ್ರಿಯ ಪ್ರಕರಣವಿದೆ. ಈವರೆಗೆ ಕೊರೋನ ಸೋಂಕಿಗೆ ಜಿಲ್ಲೆಯಲ್ಲಿ 742 ಮಂದಿ ಮೃತಪಟ್ಟಿದ್ದಾರೆ.
ದಂಡ: ಜಿಲ್ಲೆಯಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದುದಕ್ಕೆ ಸಂಬಂಧಿಸಿ ಈವರೆಗೆ 40,903 ಪ್ರಕರಣ ದಾಖಲಿಸಿ, 42,64,230 ರೂ. ದಂಡ ವಸೂಲಿ ಮಾಡಲಾಗಿದೆ.