ದ.ಕ. ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಎಸ್.ಆರ್.ಭಗವಾನ್ ಅಧಿಕಾರ ಸ್ವೀಕಾರ
Update: 2021-04-02 12:35 IST
ಮಂಗಳೂರು, ಎ.2: ದಕ್ಷಿಣ ಕನ್ನಡ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಎಸ್.ಆರ್.ಭಗವಾನ್ ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ.
ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಸೋನಾವಣೆ ರಿಷಿಕೇಶ್ ಭಗವಾನ್ ಅವರನ್ನು ದ.ಕ. ಜಿಲ್ಲಾ ಎಸ್ಪಿಯಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿತ್ತು. ಅದರಂತೆ ಇಂದು ಜಿಲ್ಲೆಗೆ ಆಗಮಿಸಿದ ಅವರು ನಿರ್ಗಮನ ಎಸ್ಪಿ ಬಿ.ಎಂ.ಲಕ್ಷ್ಮೀ ಪ್ರಸಾದ್ ಅವರಿಂದ ಅಧಿಕಾರ ವಹಿಸಿಕೊಂಡರು.
ದ.ಕ. ಎಸ್ಪಿಯಾಗಿದ್ದ ಬಿ.ಎಂ.ಲಕ್ಷ್ಮೀಪ್ರಸಾದ್ ರನ್ನು ಶಿವಮೊಗ್ಗ ಜಿಲ್ಲಾ ಎಸ್ಪಿಯಾಗಿ ವರ್ಗಾವಣೆಗೊಳಿಸಲಾಗಿದೆ.