×
Ad

ಅಂಬಲಪಾಡಿ: ಯಕ್ಷಗಾನ ಕಲಿಕಾ ತರಗತಿ ಉದ್ಘಾಟನೆ

Update: 2021-04-02 17:37 IST

 ಉಡುಪಿ, ಎ.2:ಯಕ್ಷಗಾನ ನೃತ್ಯ ಕಲಿಕೆ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕಾರಣವಾಗುತ್ತದೆ. ಬದುಕಿಗೊಂದು ಶಿಸ್ತು ಕಲಿಸುತ್ತದೆ ಎಂದು ಅಂಬಲಪಾಡಿ ಶ್ರೀ ಲಕ್ಷ್ಮೀ ಜನಾರ್ದನ ದೇವಳದ ಧರ್ಮದರ್ಶಿ ಡಾ. ನಿ.ಬೀ. ವಿಜಯ ಬಲ್ಲಾಳ್ ಅಭಿಪ್ರಾಯ ಪಟ್ಟಿದ್ದಾರೆ.

ಅಂಬಲಪಾಡಿ ಶ್ರೀಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾಮಂಡಳಿಯ ನೂತನ ಕಟ್ಟಡ ‘ಶ್ರೀಜನಾರ್ದನ ಮಂಟಪ’ದಲ್ಲಿ ಬುಧವಾರ ಯಕ್ಷಗಾನ ಕಲಿಕಾ ತರಗತಿಯನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್, ಇಂದಿರಾ ಶಿವರಾಯ ಪಾಲಿಟೆಕ್ನಿಕಲ್ ಕಾಲೇಜಿನ ನಿರ್ದೇಶಕ ಡಾ. ಮೋಹನ್‌ದಾಸ್ ಭಟ್ ಅತಿಥಿಗಳಾಗಿ ಭಾಗವಹಿಸಿದ್ದರು. ಯಕ್ಷಗಾನ ಗುರು ನರಸಿಂಹ ತುಂಗ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೆ ಪ್ರತೀ ಭಾನುವಾರ ತರಗತಿ ನಡೆಸಲಾಗುತ್ತದೆ. ಎಲ್ಲ ವಿದ್ಯಾರ್ಥಿಗಳಿಗೆ ನೋಟ್ ಬುಕ್, ಪೆನ್ನು ವಿತರಿಸಲಾಯಿತು. ಉಪಾಧ್ಯಕ್ಷ ಕೆ. ಅಜಿತ್ ಕುಮಾರ್ ಸದಸ್ಯರಾದ ಪ್ರೊ. ನಾರಾಯಣ ಎಂ. ಹೆಗಡೆ, ಜಯ ಕೆ., ಪ್ರವೀಣ ಉಪಾಧ್ಯ, ಪ್ರಕಾಶ್ ಹೆಬ್ಬಾರ್, ಸುನಿಲ್ ಕುಮಾರ್, ರಮೇಶ್ ಸಾಲ್ಯಾನ್ ಉಪಸ್ಥಿತರಿದ್ದರು.

ಸಂಸ್ಥೆಯ ಅಧ್ಯಕ್ಷ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಸಂಸ್ಥೆಯ ಸದಸ್ಯ ಮಂಜುನಾಥ ತೆಂಕಿಲಾಯ ವಂದಿಸಿದರು. ಕೋಶಾಧಿಕಾರಿ ನಟರಾಜ ಉಪಾಧ್ಯ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News