ಕೋವಿಡ್ -19 ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಮಹಾರಾಷ್ಟ್ರದಲ್ಲಿ ಮತ್ತೊಮ್ಮೆ ಲಾಕ್‌ಡೌನ್‌:ಉದ್ಧವ್ ಠಾಕ್ರೆ

Update: 2021-04-02 15:32 GMT

ಮುಂಬೈ: ಕೋವಿಡ್ -19 ಪರಿಸ್ಥಿತಿ ಹೀಗೆಯೇ ಮುಂದುವರಿದರೆ, ಮಹಾರಾಷ್ಟ್ರದಲ್ಲಿ ಮತ್ತೊಮ್ಮೆ ಲಾಕ್‌ಡೌನ್‌ ವಿಧಿಸಲಾಗುವುದು ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಶುಕ್ರವಾರ ಹೇಳಿದ್ದಾರೆ.

ರಾಜ್ಯದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಲು ಶುಕ್ರವಾರ ಸಭೆ ನಡೆಸಿದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ರಾತ್ರಿ 8: 30 ರ ಸುಮಾರಿಗೆ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದರು.

ಪುಣೆ ಜಿಲ್ಲೆಯು ಮುಂಬೈನ ದೈನಂದಿನ ವ್ಯಾಕ್ಸಿನೇಷನ್ ಅಂಕಿ-ಅಂಶಗಳನ್ನು ಮೀರಿಸಿದ್ದರೂ ಆ ಜಿಲ್ಲೆಯಲ್ಲಿ ಪ್ರಕರಣಗಳು ಹೆಚ್ಚಿದೆ ಎಂದು 'ಟೈಮ್ಸ್ ಆಫ್ ಇಂಡಿಯಾ' ವರದಿ ಮಾಡಿದೆ.  ಜನವರಿ 16 ರಂದು ದೇಶದಲ್ಲಿ ಕೊರೋನ ಲಸಿಕೆ ನೀಡಿಕೆ  ಪ್ರಾರಂಭವಾದಾಗಿನಿಂದ ಮುಂಬೈನಲ್ಲಿ  ಲಸಿಕೆ ನೀಡಿಕೆ ಕಾರ್ಯವನ್ನು ತೀವ್ರಗೊಳಿಸಲಾಗಿತ್ತು. ಆದರೆ ಇತ್ತೀಚಿನ ಮಾಹಿತಿಯ ಪ್ರಕಾರ ಪುಣೆ ಪ್ರದೇಶವು ದಿನಕ್ಕೆ 35,000 ಡೋಸ್‌ಗಳನ್ನು ನಿರಂತರವಾಗಿ ದಾಖಲಿಸುತ್ತಿದೆ. ಇದು ಮುಂಬೈ ಉಪನಗರ ಪ್ರದೇಶಕ್ಕಿಂತ ಹೆಚ್ಚಾಗಿದೆ.

ಕೋವಿಡ್ -19 ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪುಣೆಯಲ್ಲಿ  ಬಾರ್‌ಗಳು ಮತ್ತು ರೆಸ್ಟೋರೆಂಟ್‌ಗಳನ್ನು ಎಪ್ರಿಲ್ 3 ರಿಂದ ಏಳು ದಿನಗಳವರೆಗೆ ಮುಚ್ಚುವುದಾಗಿ ಘೋಷಿಸಿದ ಕೆಲವೇ ಗಂಟೆಗಳ ನಂತರ ಉದ್ಧವ್ ಠಾಕ್ರೆ ರಾಜ್ಯದಲ್ಲಿ ಲಾಕ್ ಡೌನ್ ಹೇರುವ ಸುಳಿವು ನೀಡಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News