×
Ad

ಎ.4: ಮೆಡಾಕ್‌ನಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Update: 2021-04-02 22:14 IST

ಮಂಗಳೂರು, ಎ.2: ರಾ.ಹೆ.66ರ ತೊಕ್ಕೊಟ್ಟು ಜಂಕ್ಷನ್‌ನಲ್ಲಿರುವ ‘ಮೆಡಾಕ್ ಪಾಲಿಕ್ಲಿನಿಕ್’ನಲ್ಲಿ ಎ.4ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರಗೆ ಉಚಿತ ವೈದ್ಯಕೀಯ ಶಿಬಿರ ನಡೆಯಲಿದೆ.

ಮೂತ್ರಶಾಸ್ತ್ರ ಚಿಕಿತ್ಸೆ, ನೇತ್ರ ಚಿಕಿತ್ಸೆ, ಮೂಳೆ ಚಿಕಿತ್ಸೆ, ಹೃದ್ರೋಗ ಚಿಕಿತ್ಸೆ, ಜನರಲ್ ಮೆಡಿಸಿನ್, ಸ್ತ್ರೀರೋಗ ಚಿಕಿತ್ಸೆ, ಮಕ್ಕಳ ಚಿಕಿತ್ಸೆ, ಚರ್ಮ ರೋಗ ಚಿಕಿತ್ಸೆ, ಕಿವಿ, ಮೂಗು, ಗಂಟಲು ಚಿಕಿತ್ಸೆ, ದಂತ ಚಿಕಿತ್ಸೆಯ ತಪಾಸಣೆಯ ಸೌಲಭ್ಯವಿದೆ.

ಆರೋಗ್ಯ ತಪಾಸಣೆ ಉಚಿತವಾಗಿರುತ್ತದೆ. ಪ್ರಯೋಗಾಲಯ ಪರೀಕ್ಷೆಯಲ್ಲಿ ಶೇ.50, ದಂತ ಚಿಕಿತ್ಸೆಗೆ ಶೇ.25, ಫಾರ್ಮಸಿಯಲ್ಲಿ ಔಷಧಗಳಿಗೆ ಶೇ.5 ರಿಯಾಯಿತಿ ನೀಡಲಾಗುವುದು. ಅಲ್ಲದೆ ಬಿಪಿಎಲ್ ಕಾರ್ಡ್ ಹೊಂದಿರುವ 25 ಮಂದಿಗೆ ಉಚಿತ ಕನ್ನಡಕ ನೀಡಲಾಗುವುದು. ಆಸಕ್ತರು ಮೊ.ಸಂ: 8686212103 ಈ ಸಂಖ್ಯೆಗೆ ಕರೆ ಮಾಡಿ ಹೆಸರು ನೋಂದಾಯಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News