ರಾಜ್ಯ ಸರಕಾರ ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಲು ಎಸ್‍ಡಿಪಿಐ ಆಗ್ರಹ

Update: 2021-04-02 17:23 GMT

ಬೆಂಗಳೂರು, ಎ.2: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ, ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ ಮತ್ತು ಬಿಜೆಪಿಯ ವರಿಷ್ಠರಿಗೆ ದೂರು ನೀಡಿ ಮುಖ್ಯಮಂತ್ರಿ ಆಡಳಿತ ನಿಯಮಗಳನ್ನು ಉಲ್ಲಂಘಿಸಿ, ಸಚಿವರ ಗಮನಕ್ಕೂ ತರದೆ, ಸುಮಾರು 1200 ಕೋಟಿ ರೂ.ಅನುದಾನ ಆರ್.ಡಿ.ಪಿ.ಆರ್ ಇಲಾಖೆಯಿಂದ ನೇರವಾಗಿ ಬಿಡುಗಡೆ ಮಾಡಿರುವುದು ನಿಯಮ ಬಾಹಿರವಾಗಿದೆ ಎಂದು ಆರೋಪಿಸಿರುವುದು ಗಂಭೀರವಾದ ವಿಷಯ ಎಂದು ಎಸ್‍ಡಿಪಿಐ ಅಧ್ಯಕ್ಷ ಅಬ್ದುಲ್ ಹನ್ನಾನ್ ತಿಳಿಸಿದ್ದಾರೆ.

ಇದನ್ನು ಗಮನಿಸಿದರೆ ರಾಜ್ಯದಲ್ಲಿ ಆಡಳಿತ ಸಂಪೂರ್ಣವಾಗಿ ಕುಸಿದಿದೆ ಎಂದು ಸ್ಪಷ್ಟವಾಗಿ ತಿಳಿಯುತ್ತದೆ. ಅದಲ್ಲದೆ ಸಾರ್ವಜನಿಕ ಆಡಳಿತ ಸೂಚ್ಯಂಕ (ಪಿ.ಎ.ಐ) ವರದಿ ಪ್ರಕಾರ ರಾಜ್ಯ ಸರಕಾರ ಸುಸ್ಥಿರ ಆಡಳಿತ ನೀಡುವುದರಲ್ಲಿ 5ನೇ ಸ್ಥಾನಕ್ಕೆ ಕುಸಿದಿರುವುದು ಅತ್ಯಂತ ಖೇದಕರವಾಗಿದೆ. ಸರಕಾರ  ಜನರ ನಂಬಿಕೆ ಕಳೆದುಕೊಳ್ಳುತ್ತಾ ದುರಾಡಳಿತದೊಂದಿಗೆ ಆಡಳಿತ ನಡೆಸುವುದು ರಾಜ್ಯದ ಹಿತಾಸಕ್ತಿಗೆ ಮಾರಕ. ಆದುದರಿಂದ, ಈ ಜನ ವಿರೋಧಿ ಸರಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ರಾಜ್ಯಪಾಲರು ಶಿಫಾರಸು ಮಾಡಬೇಕೆಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News