×
Ad

ಎ.14ರವರೆಗೆ ಬೆಂಗಳೂರು ಮೆಡಿಕಲ್ ಕಾಲೇಜಿನ ತರಗತಿಗಳು ಸ್ಥಗಿತ

Update: 2021-04-03 23:30 IST

ಬೆಂಗಳೂರು, ಎ.3: ಬೆಂಗಳೂರು ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ಮೆಡಿಕಲ್ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆಯ ಎಂಬಿಬಿಎಸ್ ತರಗತಿಗಳನ್ನು ಎ.14ರವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ. 

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಸ್ಥೆಯು, ಬೆಂಗಳೂರು ಮೆಡಿಕಲ್ ಕಾಲೇಜಿನ ಕೆಲವು ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಂಬಿಬಿಎಸ್‍ನ ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News